ಆಂಧ್ರದಲ್ಲಿ ಟಿಡಿಪಿ, ಬಿಜೆಪಿ ಮೈತ್ರಿ

ಹೈದರಾಬಾದ್: ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಮತ್ತು ಬಿಜೆಪಿ ಪಕ್ಷ ಮೈತ್ರಿಗೆ ಮುಂದಾಗಿದ್ದು, ಭಾನುವಾರ ಉಭಯ ನಾಯಕರು ಮೈತ್ರಿ ವಿಚಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಆಂಧ್ರ ಪ್ರದೇಶ ರಾಜಕೀಯಯದಲ್ಲಿ ಕೆಲ ದಿನಗಳಿಂದ ಕೇಳಿಬರುತ್ತಿದ್ದ, ಬಿಜೆಪಿ ಮತ್ತು ಟಿಡಿಪಿ ಪಕ್ಷಗಳ ಮೈತ್ರಿಕೂಟ ರಚನೆಗೆ ಇಂದು ಅಧಿಕೃತ ಮುದ್ರೆ ಬಿದ್ದಿದೆ. ಇಂದು ಹೈದರಾಬಾದ್ ನಲ್ಲಿ ಟಿಡಿಪಿ ಮುಖಂಡ ಚಂದ್ರ ಬಾಬು ನಾಯ್ಡು ಸುದ್ದಿಗೋಷ್ಟಿ ನಡೆಸಿ, ಬಿಜೆಪಿಯೊಂದಿಗೆ ತಾವು ಕೈಜೋಡಿಸುತ್ತಿರುವ ವಿಚಾರವನ್ನು ಅಧಿಕೃತವಾಗಿ ಘೋಷಿಸಿದರು. ಬಿಜೆಪಿ ಮತ್ತು ಟಿಡಿಪಿ ಮೈತ್ರಿ ವಿಚಾರ ಹಲವು ದಿನಗಳ ಹಳೆಯ ವಿಚಾರವೇ ಆದರೂ ಸೀಟು ಹಂಚಿಕೆಯಲ್ಲಿನ ಗೊಂದಲದಿಂದಾಗಿ ಮೈತ್ರಿ ವಿಚಾರ ಬಿಕ್ಕಾಟ್ಟಾಗಿತ್ತು.
ಆದರೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನಕ್ಕೆ ಬಂದಿರುವ ಉಭಯ ಪಕ್ಷಗಳು ಮೈತ್ರಿ ವಿಚಾರವನ್ನು ಅಧಿಕೃತವಾಗಿ ಘೋಷಿಸಿವೆ. ಮೂಲಗಳ ಪ್ರಕಾರ ತೆಲಂಗಾಣದಲ್ಲಿ 8 ಲೋಕಸಭಾ ಕ್ಷೇತ್ರಗಳನ್ನು ಮತ್ತು 47 ವಿಧಾನಸಭಾ ಕ್ಷೇತ್ರಗಳನ್ನು, ಅಂತೆಯೇ ಆಂಧ್ರ ಪ್ರದೇಶದಲ್ಲಿ ಐದು ಲೋಕಸಭಾ ಕ್ಷೇತ್ರಗಳನ್ನು ಮತ್ತು 15 ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಟಿಡಿಪಿ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ತಮ್ಮ ಸುದ್ದಿಗೋಷ್ಠಿಯಲ್ಲಿ ಪರೋಕ್ಷವಾಗಿ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ಕೆಲ ಪ್ರಯೋಜನಗಳನ್ನು ಪಡೆಯಲು ಕೆಲ ತ್ಯಾಗಗಳಿಗೆ ಸಿದ್ಧರಾಗಬೇಕು ಎಂದು ಮಾರ್ಮಿಕವಾಗಿ ಹೇಳಿದರು. ಒಟ್ಟಾರೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಚಂದ್ರಬಾಬು ನಾಯ್ಡು ಅವರು ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


