ಖಂಡಿತ ನಾನು ರಾಜಕೀಯಕ್ಕೆ ಬರುತ್ತೇನೆ: ನಟ ಉಪೇಂದ್ರ

ಶಿವಮೊಗ್ಗ: ಖಂಡಿತ ನಾನು ರಾಜಕೀಯಕ್ಕೆ ಬರುತ್ತೇನೆ. ಆದರೆ ಬರುವ ಮುನ್ನ ಸರಿಯಾಗಿ ತಯಾರಿ ನಡೆಸುತ್ತಿದ್ದೇನೆ ಎಂದು ಖ್ಯಾತ ನಟ ಉಪೇಂದ್ರ ಅವರು ಸೋಮವಾರ ಹೇಳಿದ್ದಾರೆ.
ಉಪೇಂದ್ರ ಅವರು ಇಂದು ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ನಟ ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರ ಪರವಾಗಿ ಪ್ರಚಾರ ನಡೆಸಿದರು. ಗೀತಾ ಪರ ಮತಯಾಚನೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಉಪ್ಪಿ, ನಾನು ಸಹ ರಾಜಕೀಯಕ್ಕೆ ಬರುತ್ತೇನೆ. ಆದರೆ ಬರುವ ಮುನ್ನ ಅದಕ್ಕಾಗಿ ಪೂರ್ವ ಸಿದ್ಧತೆ ಮಾಡಿಕೊಂಡು ಹೊಸ ಚಿಂತನೆ, ಹೊಸ ಯೋಜನೆಗಳೊಂದಿಗೆ ರಾಜಕೀಯ ಪ್ರವೇಶ ಮಾಡುವುದಾಗಿ ತಿಳಿಸಿದರು.
ಇನ್ನು ತಾವು ಗೀತಾ ಶಿವರಾಜ್ಕುಮಾರ್ ಅವರ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಉಪೇಂದ್ರ, ಸಮಾಜ ಸೇವೆ ಮಾಡಲು ಬಂದವರಿಗೆ ಬೆಂಬಲಿಸಲು ಬಂದಿದ್ದೇನೆ. ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ ಎಂದರು. ಅಲ್ಲದೆ ನಾನು ಒಂದೇ ಪಕ್ಷಕ್ಕೆ ಸೀಮಿತವಲ್ಲ. ನನಗೆ ಎಲ್ಲಾ ಪಕ್ಷದವರೂ ಬೇಕು. ಹೀಗಾಗಿ ತಾವು ಗೀತಾ ಅವರ ಪರ ಪ್ರಚಾರ ಮಾಡುತ್ತಿರುವುದಾಗಿ ಹೇಳಿದರು.
ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಪರ ಏಕೆ ಪ್ರಚಾರ ಮಾಡುತ್ತಿಲ್ಲ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಉಪೇಂದ್ರ, ರಮ್ಯಾ ಅವರೇ ಒಬ್ಬ ದೊಡ್ಡ ಸ್ಟಾರ್. ಆದರೂ ಅವರು ಆಹ್ವಾನ ನೀಡಿದರೆ ಖಂಡಿತ ಅವರ ಪರವಾಗಿಯೂ ತಾವು ಪ್ರಚಾರ ಮಾಡುವುದಾಗಿ ಹೇಳಿದರು.
ಜಿಲ್ಲೆಯಲ್ಲಿ ಜೆಡಿಎಸ್ ಪರ ಪ್ರಚಾರ ಮಾಡಿರುವುದು ತಮಗೆ ಖುಷಿ ತಂದಿದೆ ಎಂದು ಉಪೇಂದ್ರ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


