ಈಗಿನ ಸುದ್ದಿ

ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಖ್ಯಾತ ಛಾಯಾಗ್ರಹಕ ವಿ.ಕೆ.ಮೂರ್ತಿ ಇನ್ನಿಲ್ಲ

ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಖ್ಯಾತ ಛಾಯಾಗ್ರಹಕ ವಿ.ಕೆ.ಮೂರ್ತಿ ಇನ್ನಿಲ್ಲ
Published On :

ಬೆಂಗಳೂರು: ಛಾಯಾಗ್ರಹಣದಲ್ಲಿ ಮೊದಲ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಖ್ಯಾತ ಛಾಯಾಗ್ರಹಕ ವೆಂಕಟರಾಮ ಪಂಡಿತ ಕೃಷ್ಣಮೂರ್ತಿ ಅವರು ಸೋಮವಾರ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿ.ಕೆ.ಮೂರ್ತಿ ಅವರು ಇಂದು ಬೆಳಗ್ಗೆ ಬೆಂಗಳೂರಿನ ಶಂಕರಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

1923, ನವೆಂಬರ್ 26ರಂದು ಮೈಸೂರಿನಲ್ಲಿ ಜನಸಿದ್ದ ವಿ.ಕೆ.ಮೂರ್ತಿ ಅವರು ಕನ್ನಡದ ಹೂ ಹಣ್ಣು ಹಾಗೂ ಬಾಲಿವುಡ್‌ನ ಕಾಗಜ್ ಕೀ ಫೂಲ್, ಸಾಹೀಬ್, ಬೀಬಿ ಔರ್ ಗುಲಾಮ್ ಸೇರಿದಂತೆ ಹಲವು ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದರು. ಮೂರ್ತಿ ಅವರ ಎರಡು ಛಾಯಾಗ್ರಹಣಕ್ಕೆ ಫಿಲ್ಮ್‌ಫೇರ್ ಪ್ರಶಸ್ತಿ ಬಂದಿತ್ತು.

ಛಾಯಾಗ್ರಹಣದಲ್ಲಿ ಮೊದಲ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದ ಮೂರ್ತಿ ಅವರು ಹಲವು ನಾಟಕಗಳ ನಿರ್ದೇಶನ ಮಾಡಿದ್ದರು. ಅಲ್ಲದೆ ಅವರು ಸ್ವಾತಂತ್ರ್ಯ ಹೋರಾಟದ ವೇಳೆ, 1943ರಲ್ಲಿ ಸೆವೆವಾಸ ಸಹ ಅನುಭವಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.