ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಮುಂದುವರೆದ ರಾಮಜಪ

ನವದೆಹಲಿ: ಬಹು ನಿರೀಕ್ಷಿತ ಬಿಜೆಪಿ ಚುನಾವಣಾ ಪ್ರಣಾಳಿಕೆ ಸೋಮವಾರ ಬಿಡುಗಡೆಯಾಗಿದ್ದು, 'ಏಕ್ ಭಾರತ್, ಶ್ರೇಷ್ಠ ಭಾರತ್' ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ಮತದಾರನ ಓಲೈಕೆಗಾಗಿ ಹಲವು ಭರವಸೆಗಳನ್ನು ನೀಡಿದೆ.
ಲೋಕಸಭೆ ಚುನಾವಣೆಗೆ ಈಗಾಗಲೇ ತ್ರಿಪುರಾ ಮತ್ತು ಅಸ್ಸಾಂನಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದ್ದು, ಮತದಾನ ನಡೆಯುತ್ತಿರುವ ರಾಜ್ಯಗಳಲ್ಲಿ ಪ್ರಣಾಳಿಕೆಯ ಅಂಶಗಳನ್ನು ಪ್ರಸಾರ ಮಾಡಬಾರದು ಎಂಬ ಚುನಾವಣಾ ಆಯೋಗದ ಷರತ್ತುಬದ್ಧ ಒಪ್ಪಿಗೆಯೊಂದಿಗೆ ಬಿಜೆಪಿ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು, ಉತ್ತಮ ಆಡಳಿತ, ದೇಶದ ಅಭಿವೃದ್ಧಿ ನಮ್ಮ ಗುರಿ ಎಂದು ಹೇಳಿದರು. ಅಲ್ಲದೆ ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗಿದ್ದು, ದೇಶದ ಭವಿಷ್ಯ ಪ್ರಣಾಳಿಕೆಯಲ್ಲಿ ಬಿಂಬಿತವಾಗಿದೆ ಎಂದರು.
ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಶಿ, ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಅರುಣ್ ಜೇಟ್ಲಿ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶಗಳು
- ಕಪ್ಪು ಹಣ ವಾಪಸ್ ತರಲು ಟಾಸ್ಕ್ ಪೋರ್ಸ್ ರಚನೆ
- ಸಂವಿಧಾನದ ಅಡಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ
- ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು, ಪ್ರತಿ ರಾಜ್ಯದಲ್ಲಿ ಮಹಿಳೆಯರಿಗಾಗಿ ವಿಶೇಷ ಪೊಲೀಸ್ ಪಡೆ ರಚನೆ
- ಪ್ರತಿ ಗ್ರಾಮದಲ್ಲೂ ಕುಡಿಯುವ ನಿರೀನ ಪೈಪ್ಲೈನ್
- ರೇಲ್ವೆ ಆಧುನಿಕರಣಕ್ಕೆ ಒತ್ತು
- ಅಲ್ಪಸಂಖ್ಯಾತರಿಗೆ ರೋಜಗಾರ ಯೋಜನೆ ಭರವಸೆ
- ಮೂಲಸೌಕರ್ಯಗಳನ್ನು ಕಲ್ಲಿಸಲು ಆದ್ಯತೆ
- ಕೈಗಾರಿಕೆ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು
- ಅಕ್ರಮ ಸಂಗ್ರಹಣೆ ಮತ್ತು ಕಾಳಸಂತೆ ಮಾರಾಟದ ನಿಗ್ರಹಕ್ಕೆ ಕಟ್ಟುನಿಟ್ಟಿನ ಕ್ರಮ
- ಮದರಸಾಗಳ ಅಭಿವೃದ್ಧಿಗೆ ವಿಶೇಷ ಅನುದಾನ
- ಹೂಡಿಕೆದಾರರನ್ನು ಆಕರ್ಷಿಸಲು ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ
- ದೇಶದಲ್ಲಿ ತೈಲ, ಅನಿಲ ನಿಕ್ಷೇಪ ಶೋಧನೆಗೆ ಒತ್ತು
- ಬಹುಬ್ರ್ಯಾಂಡ್ ಚಿಲ್ಲರೆ ವ್ಯಾಪಾರ ವಲಯ ಹೊರತುಪಡಿಸಿ ಎಫ್ಡಿಐಗೆ ಅನುಮತಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


