ಮಾಜಿ ಸಿಎಂ ಕೇಜ್ರಿವಾಲ್‌ಗೆ ಮತ್ತೆ ಕಪಾಳಮೋಕ್ಷ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಮ್ಮೆ ಕಪಾಳಮೋಕ್ಷ ಮಾಡಿರುವ ಘಟನೆ ಮಂಗಳವಾರ ವರದಿಯಾಗಿದೆ.
ನವದೆಹಲಿಯಲ್ಲಿ ಎಎಪಿ ಚುನಾವಣಾ ಪ್ರಚಾರ ರ್ಯಾಲಿ ನಡೆಯುತ್ತಿದ್ದ ವೇಳೆ ಹೂವಿನ ಹಾರ ಹಾಕುವ ನೆಪದಲ್ಲಿ ಪ್ರಚಾರ ವಾಹನ ಏರಿದ ಆಟೋ ಚಾಲಕನೋರ್ವ ಕೇಜ್ರಿವಾಲ್‌ರ ಕಪಾಳಕ್ಕೆ ಹೊಡೆದಿದ್ದಾನೆ. ಇದರಿಂದ ಕೆರಳಿದ ಆಪ್ ಕಾರ್ಯಕರ್ತರು ಆತನಿಗೆ ಥಳಿಸಿದ್ದಾರೆ.
ಮಾಜಿ ಸಿಎಂ ಕೇಜ್ರಿವಾಲ್ ಮೇಲೆ ಪದೇ ಪದೆ ಹಲ್ಲೆಗಳಾಗುತ್ತಿರುವ ಘಟನೆಗಳು ವರದಿಗಳಾಗುತ್ತಿದೆ. ಕಳೆದ 1 ತಿಂಗಳಿನಲ್ಲಿ ಸುಮಾರು 5 ಬಾರಿ ಕೇಜ್ರಿವಾಲ್ ಮೇಲೆ ಹಲ್ಲೆ ನಡೆದಿದೆ. ಇದಕ್ಕೆ ಮತ್ತೊಂದು ನಿರ್ದಶನ ಎಂದರೇ ಇಂದು ಪಕ್ಷದ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಆಟೋ ಚಾಲಕನೊಬ್ಬ ಕಪಾಳಮೋಕ್ಷ ಮಾಡಿರುವುದು.
ಕೆಲ ದಿನಗಳಿಂದ ಕೇಜ್ರಿವಾಲ್ ಮೇಲೆ ನಿರಂತರವಾಗಿ ಹಲ್ಲೆಗಳಾಗುತ್ತಿದ್ದು, ಏಪ್ರಿಲ್ 4 ರಂದು ದಕ್ಷಿಣ ದೆಹಲಿಯ ಸುಲ್ತಾನಪುರಿಯಲ್ಲಿ ಪಕ್ಷದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಕ್ಕೆ ಹೊಡೆದಿದ್ದ. ಮತ್ತೊಂದೆಡೆ ಮಾರ್ಚ್ 28 ರಂದು ಹರಿಯಾಣದಲ್ಲಿ ಪ್ರಚಾರದಲ್ಲಿ ತೊಡಗಿದ್ದಾಗ ಕೇಜ್ರಿವಾಲ್‌ರ ಬೆನ್ನಿನ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿದ್ದ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಮಾರ್ಚ್ 25 ರಂದು ವಾರಣಾಸಿಗೆ ಜನಭಿಪ್ರಾಯ ಸಂಗ್ರಹಣಗೆ ತೆರಳಿದ್ದ ಸಂದರ್ಭದಲ್ಲಿ ವಾರಣಾಸಿಯಲ್ಲಿ ಕೇಜ್ರಿವಾಲ್‌ಗೆ ವ್ಯಕ್ತಿಯೋರ್ವ ಕಪ್ಪುಮಸಿ ಎರಚಿದ್ದ.
ಯಾವುದೇ ಭದ್ರತೆ ಇಲ್ಲದೆ ಸಾರ್ವಜನಿಕರ ಮಧ್ಯೆ ತಿರುಗುತ್ತಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್‌ಗೆ ಭದ್ರತೆ ಇಲ್ಲದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


