ಆಯೋಗದ ವಿರುದ್ಧ ದೀದಿ ಸೆಡ್ಡು: ಪ.ಬಂಗಾಳದಲ್ಲಿ ಚುನಾವಣೆ ರದ್ದು?

ನವದೆಹಲಿ: ಚುನಾವಣಾ ಆಯೋಗದ ವಿರುದ್ಧವೇ ಸೆಡ್ಡು ಹೊಡೆದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರದ್ಧ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳದಲ್ಲಿ ಕೆಲವು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನೇ ರದ್ದುಗೊಳಿಸುವ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ಕೆಲವು ಅಧಿಕಾರಿಗಳ ವರ್ಗಾವಣೆಗೆ ಆದೇಶಿಸಿತ್ತು. ಆದರೆ ಆಯೋಗದ ಆದೇಶಕ್ಕೆ ಕಿಮ್ಮತ್ತು ಕೊಡದ ದೀದಿ, ಯಾವುದೇ ಅಧಿಕಾರಿಗಳನ್ನು ತಾವು ವರ್ಗಾವಣೆ ಮಾಡುವುದಿಲ್ಲ. ಬೇಕಾದರೆ ಚುನಾವಣಾ ಆಯೋಗ ನನ್ನನ್ನು ಬಂಧಿಸಲಿ ಎಂದು ಸವಾಲು ಹಾಕಿದ್ದಾರೆ.
ಒಂದು ವೇಳೆ ಮಮತಾ ಬ್ಯಾನರ್ಜಿ ಅವರು ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ್ದೇಯಾದರೆ, ಸಂಬಂಧಿಸಿದ ಜಿಲ್ಲೆಗಳಲ್ಲಿ ಚುನಾವಣೆಯನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನಿನ್ನೆಯಷ್ಟೆ ಚುನಾವಣಾ ಆಯೋಗ ಐವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಓರ್ವ ಜಿಲ್ಲಾಧಿಕಾರಿ ಸೇರಿದಂತೆ 8 ಅಧಿಕಾರಿಗಳ ವರ್ಗಾವಣೆ ಮಾಡುವಂತೆ ಸೂಚಿಸಿತ್ತು. ಆದರೆ ಆಯೋಗದ ಸೂಚನೆಯನ್ನು ಧಿಕ್ಕರಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಾವು ಯಾವುದೇ ಕಾರಣಕ್ಕೂ ಈ ಅಧಿಕಾರಿಗಳ ವರ್ಗಾವಣೆ ಮಾಡುವುದಿಲ್ಲ ಮತ್ತು ಈ ಸಂಬಂಧ ತಾವು ಜೈಲಿಗೆ ಹೋಗಲು ಸಿದ್ಧ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


