ಗೃಹ ಸಚಿವರೊಂದಿಗೆ ಕಾಣಿಸಿಕೊಂಡಿದ್ದ ರೌಡಿ ಅಜಂ ಬಂಧನ

ಬೆಂಗಳೂರು: ಚುನಾವಣೆ ಪ್ರಚಾರದ ವೇಳೆ ಗೃಹ ಸಚಿವ ಕೆ.ಜೆ.ಜಾರ್ಜ್ ಅವರೊಂದಿಗೆ ಕಾಣಿಸಿಕೊಂಡಿದ್ದ ರೌಡಿ ಶೀಟರ್ ಬ್ರಿಗೇಡ್ ಅಜಂನನ್ನು ಶಿವಾಜಿನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಮುಂಜಾಗ್ರತ ಕ್ರಮವಾಗಿ ಅಜಂನನ್ನು ಇಂದು ಪೊಲೀಸರು ವಶಕ್ಕೆ ತೆಗೆದುಕೊಂಡು ತಾಲೂಕ ದಂಡಾಧಿಕಾರಿಯ ಮುಂದೆ ಹಾಜರುಪಡಿಸಿದ್ದಾರೆ.
ಅಜಂ ವಿರುದ್ಧ ದರೋಡೆ, ಕೊಲೆ ಯತ್ನ, ಕೊಲೆ ಆರೋಪ ಸೇರಿದಂತೆ ಹಲವು ಪ್ರಕರಣಗಳಿದ್ದು, ಅಜಂನೊಂದಿಗೆ ವಾಹನ ಹಂಚಿಕೊಂಡ ಜಾರ್ಜ್, ರೋಷನ್ ಬೇಗ್ ಹಾಗೂ ರಿಜ್ವಾನ್ ಅರ್ಷದ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಶಿವಾಜಿನಗರ ಪೊಲೀಸರು ರೌಡಿ ಅಜಂನನ್ನು ಬಂಧಿಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಭಾನುವಾರ ರಾತ್ರಿ ತೆರೆದ ವಾಹನದಲ್ಲಿ ಪ್ರಚಾರ ಕೈಗೊಳ್ಳಲಾಗಿತ್ತು. ಈ ರ್ಯಾಲಿ ಸಂದರ್ಭದಲ್ಲಿ ರಿಜ್ವಾನ್ ಅರ್ಷದ್ ಜತೆ ಗೃಹ ಸಚಿವ ಕೆ.ಜೆ. ಜಾರ್ಜ್ ಹಾಗೂ ವಾರ್ತಾ ಸಚಿವ ರೋಷನ್ ಬೇಗ್ ವಾಹನದಲ್ಲಿ ಪ್ರಚಾರ ಮಾಡಿದರು. ಇವರ ಜತೆಯಲ್ಲೇ ರೌಡಿ ಶೀಟರ್ ಬ್ರಿಗೇಡ್ ಅಜಂ ಕೂಡ ಇದ್ದರು.
ಬ್ರಿಗೇಡ್ ಅಜಂ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ ನಗರದ ನಾನಾ ಠಾಣೆಗಳಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, 1999ರಿಂದಲೇ ರೌಡಿ ಪಟ್ಟಿಯಲ್ಲಿದ್ದಾರೆ. ಬ್ರಿಗೇಡ್ ಅಜಂ ಯಾರು ಎಂಬುದೇ ಗೊತ್ತಿಲ್ಲ. ಪ್ರಚಾರಕ್ಕೆ ಹೋದಾಗ ಸಾಕಷ್ಟು ಜನರಿರುತ್ತಾರೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹಾಗೂ ಅಭ್ಯರ್ಥಿ ರಿಜ್ವಾನ್ ಅರ್ಷದ್ ಹೇಳಿದ್ದಾರೆ.
ಅಜಂ ವಿರುದ್ಧದ ಪ್ರಕರಣಗಳು
1996 ಕೊಲೆ, ಪ್ರಾಣ ಬೆದರಿಕೆ
2003 ಅಪಹರಣ ಪ್ರಕರಣ
2004-05 ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪ
2006 ಭಾರತಿನಗರದಲ್ಲಿ ಕೊಲೆ ಯತ್ನ
2008-09 ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪ
2009 ಬಳ್ಳಾರಿಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಪ್ರಕರಣ
2013 ಶಿವಾಜಿನಗರದ ಬ್ರೈಟ್ ಜ್ಯುವೆಲರ್ಸ್ಗೆ ದಾಳಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


