ಮುಸ್ಲಿಂ ಸೈನಿಕರಿಂದ ಕಾರ್ಗಿಲ್ಗೆ ಜಯ: ಸಮರ್ಥಿಸಿಕೊಂಡ ಅಜಂ

ನವದೆಹಲಿ: ಭಾರತದ ಕಾರ್ಗಿಲ್ ಯುದ್ಧದಲ್ಲಿ ಗೆಲ್ಲಲು ಮುಸ್ಲಿಮರು ಕಾರಣ, ಹಿಂದೂಗಳಲ್ಲ ಎಂದು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಕಾರ್ಗಿಲ್ ಯಶಸ್ಸಿಗೆ ಮುಸ್ಲಿಮರೇ ಕಾರಣ ಎಂದು ಸಮರ್ಥಿಸಿದ್ದಾರೆ.
ಕಾರ್ಗಿಲ್ ಯಶಸ್ಸಿಗೆ ಮುಸ್ಲಿಮರೇ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಉತ್ತರ ಪ್ರದೇಶದ ಸಚಿವ ಅಜಂ ಖಾನ್ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಭಾರತದ ಕಾರ್ಗಿಲ್ ಯುದ್ಧದಲ್ಲಿ ಗೆಲ್ಲಲು ಮುಸ್ಲಿಮರು ಕಾರಣ, ಹಿಂದೂಗಳಲ್ಲ ಎಂದು ಹೇಳಿಕೆ ನೀಡಿದ್ದ ಅಜಂ ಖಾನ್ ವಿರುದ್ಧ ಚುನಾವಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದು, ಅಜಂ ಖಾನ್ಗೆ ನೋಟೀಸ್ ಜಾರಿ ಮಾಡಿದೆ.
ಇತ್ತೀಚೆಗೆ ಅಜಂ ಖಾನ್ ಅವರು, ಹಿಂದೂಗಳ ವಿರುದ್ಧ ಹೇಳಿಕೆ ನೀಡುತ್ತಿದ್ದು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕೊಲೆಗಡುಕ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕಾರ್ಗಿಲ್ ಜಯಕ್ಕೆ ಮುಸ್ಲಿಂ ಸೈನಿಕರು ಮಾತ್ರ ಕಾರಣ, ಇದರಲ್ಲಿ ಹಿಂದೂ ಸೈನಿಕರ ಪಾತ್ರವಿಲ್ಲ ಎಂದು ಹೇಳಿದ್ದಾರೆ.
ಅಜಂ ಖಾನ್ ಹೇಳಿಕೆಗೆ ಖಂಡಿಸಿರುವ ಬಿಜೆಪಿ ಇಂದು ಸಂಜೆ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದೆ.
ಅಜಂ ಖಾನ್ ಹೇಳಿಕೆಗೆ ತಿರುಗೇಟು ನೀಡಿರುವ ನಿವೃತ್ತ ಸೇನಾ ಮುಖ್ಯಸ್ಥ ವಿ.ಕೆ ಸಿಂಗ್, ಕಾರ್ಗಿಲ್ ಯುದ್ಧದಲ್ಲಿ ಭಾರತ ಜಯ ಸಾಧಿಸಿದೆ. ಆದರೆ ಈ ಜಯ ಕೇವಲ ಕೆಲ ವ್ಯಕ್ತಿಗಳು ಅಥವಾ ಒಂದು ಸಮುದಾಯದಿಂದಲ್ಲ. ಈ ಜಯದಲ್ಲಿ ಇಡೀ ದೇಶದ ಎಲ್ಲಾ ಸಮುದಾಯದ ಪಾತ್ರವಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


