ಈಗಿನ ಸುದ್ದಿ

ರಾಧಿಕಾ ಕುಮಾರಸ್ವಾಮಿ ಹೆಸರಲ್ಲಿ ಅಕ್ರಮ ಆಸ್ತಿ, ಕಪ್ಪುಹಣ: ಕಾಂಗ್ರೆಸ್ ಆರೋಪ

ರಾಧಿಕಾ ಕುಮಾರಸ್ವಾಮಿ ಹೆಸರಲ್ಲಿ ಅಕ್ರಮ ಆಸ್ತಿ, ಕಪ್ಪುಹಣ: ಕಾಂಗ್ರೆಸ್ ಆರೋಪ
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎರಡನೇ ಪತ್ನಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರಲ್ಲಿ ಅಕ್ರಮ ಆಸ್ತಿ ಹಾಗೂ ಕಪ್ಪುಹಣ ಇದೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಬುಧವಾರ ದೂರು ನೀಡಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹೆಚ್‌ಡಿಕೆ ಅವರು, ತಮ್ಮ ನಾಮಪತ್ರ ಸಲ್ಲಿಸುವ ವೇಳೆ ಅನಿತಾ ಕುಮಾರಸ್ವಾಮಿ ಅವರ ಆಸ್ತಿ ವಿವರಗಳನ್ನು ಮಾತ್ರ ನೀಡಿದ್ದು, ಮತ್ತೊಬ್ಬ ಪತ್ನಿ ರಾಧಿಕಾ ಕುಮಾರಸ್ವಾಮಿ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಧನಂಜಯ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಮೊದಲ ಪತ್ನಿ ಅನಿತಾ ಕುಮಾರಸ್ವಾಮಿ ಚಾರಾಸ್ತಿ ಹಾಗೂ ಸ್ಥಿರಾಸ್ಥಿ ವಿವರಗಳನ್ನು ಮಾತ್ರ ನೀಡಿದ್ದು, ರಾಧಿಕಾ ಕುಮಾರಸ್ವಾಮಿಯವರ ಆಸ್ತಿ ವಿವರಗಳನ್ನು ನಮೂದಿಸಿಲ್ಲ ಎಂದು ದೂರಿದ್ದಾರೆ.

ರಾಧಿಕಾ ಹೆಸರಲ್ಲಿ ಅಕ್ರಮ ಆಸ್ತಿ ಹಾಗೂ ಕಪ್ಪುಹಣ ಇರಿಸಲಾಗಿದ್ದು, ಹೀಗಾಗಿ ಅವರ ಹೆಸರನ್ನು ಆಯೋಗಕ್ಕೆ ನೀಡಿಲ್ಲ. ರಾಧಿಕಾ ಕುಮಾರಸ್ವಾಮಿ ಅವರ ಬ್ಯಾಂಕ್ ಖಾತೆ ಮತ್ತು ಆಸ್ತಿಯ ವಿವರಗಳನ್ನು ಪರಿಶೀಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ. ಒಂದು ವೇಳೆ ರಾಜ್ಯ ಚುನಾವಣಾ ಆಯೋಗ ತನಿಖೆ ನಡೆಸದಿದ್ದರೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಧನಂಜಯ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.