ಈಗಿನ ಸುದ್ದಿ

2ನೇ ಹಂತ: ನಾಗಾಲ್ಯಾಂಡ್ನಲ್ಲಿ ಶೇ.60ರಷ್ಟು, ಮಣಿಪುರದಲ್ಲಿ ಶೇ.50ರಷ್ಟು ಮತದಾನ

2ನೇ ಹಂತ: ನಾಗಾಲ್ಯಾಂಡ್ನಲ್ಲಿ ಶೇ.60ರಷ್ಟು, ಮಣಿಪುರದಲ್ಲಿ ಶೇ.50ರಷ್ಟು ಮತದಾನ
Published On :

ನವದೆಹಲಿ: ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಇಂದು ಬೆಳಗ್ಗೆಯಿಂದ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ ಎರಡು ಗಂಟೆಯವರೆಗೆ ನಾಗಾಲ್ಯಾಂಡ್ನಲ್ಲಿ ಶೇ.60ರಷ್ಟು, ಮಣಿಪುರದಲ್ಲಿ ಶೇ.50ರಷ್ಟು ಮತದಾನವಾಗಿದೆ.

ಎರಡು ರಾಜ್ಯಗಳ ತಲಾ ಒಂದು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಮತದಾನ ಬಹುತೇಕ ಶಾಂತಿಯುತವಾಗಿದೆ.

ಬುಡಕಟ್ಟು ಮೀಸಲು ಕ್ಷೇತ್ರ ಮಣಿಪುರದ 1406 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕು ಈಶಾನ್ಯ ರಾಜ್ಯಗಳಲ್ಲಿನ ಒಟ್ಟು ಆರು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಮಣಿಪುರ, ನಾಗಾಲ್ಯಾಂಡ್ನ ತಲಾ ಒಂದು ಸ್ಥಾನ ಹಾಗೂ ಅರುಣಾಚಲಪ್ರದೇಶ, ಮೇಘಾಲಯದ ತಲಾ ಎರಡು ಸ್ಥಾನಗಳಿಗೆ ಹಕ್ಕು ಚಲಾವಣೆಯಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.