ಈಗಿನ ಸುದ್ದಿ

ವಡೋದರಾದಿಂದ ಮೋದಿ ನಾಮಪತ್ರ

ವಡೋದರಾದಿಂದ ಮೋದಿ ನಾಮಪತ್ರ
Published On :

ವಡೋದರಾ: ಗುಜರಾತ್‌ನ ವಡೋದರಾದಿಂದ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಸ್ಪರ್ಧಿಸುತ್ತಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಮೋದಿ ಜಿಲ್ಲಾಧಿಕಾರಿ ಕಚೇರಿವರಗೆ ರೋಡ್ ಶೋ ನಡೆಸಿದರು. ತಮ್ಮ ಆಪ್ತ ಬೆಂಬಲಿಗರೊಂದಿಗೆ ಮೋದಿ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಚಹಾ ಮಾರಾಟಗಾರ ಕಿರಣ್ ಮಹಿದಾ ಸಹ ಉಪಸ್ಥಿತರಿದ್ದರು.

ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ವಡೋದರಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಗುಜರಾತ್‌ನಲ್ಲಿ ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನವಾಗಿದ್ದು, ಏಪ್ರಿಲ್ 30ರಂದು ಮತದಾನ ನಡೆಯಲಿದೆ.

ವಡೋದರಾ ನನ್ನ 'ಕರ್ಮಭೂಮಿ': ಮೋದಿ
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಪಕ್ಷದ ನಾಯಕರಿಗೆ ಮತ್ತು ತಮ್ಮ ಸಾವಿರಾರು ಬೆಂಬಲಿಗರಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ವಡೋದರಾ ನನ್ನ 'ಕರ್ಮಭೂಮಿ'ಯಾಗಿದ್ದು, ವಡೋದರಾ ಜನತೆಗೆ ತಾನು ಆಭಾರಿಯಾಗಿರುವುದಾಗಿ ಹೇಳಿದರು.

ವಡೋದರಾದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಅಭಿವೃದ್ಧಿಯನ್ನು ನೋಡಿ ವಡೋದರಾ ಜನತೆ ತಮ್ಮನ್ನು ಆರ್ಶೀವದಿಸಲಿದ್ದಾರೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.