ಜಶೋದಾ ಬೇನ್ ನನ್ನ ಪತ್ನಿ: ಪ್ರಮಾಣ ಪತ್ರದಲ್ಲಿ ಮೋದಿ ಘೋಷಣೆ

ವಡೋದರಾ: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಮೊದಲ ಬಾರಿ ತಾವು ವಿವಾಹಿತ ಎಂದು ಘೋಷಿಸಿಕೊಂಡಿದ್ದಾರೆ.
17ನೇ ವಯಸ್ಸಿನಲ್ಲಿ ನಾನು ಮದುವೆಯಾಗಿದ್ದು, ಜಶೋದಾ ಬೇನ್ ನನ್ನ ಪತ್ನಿ ಎಂದು ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಮೋದಿ ಹೇಳಿಕೊಂಡಿದ್ದಾರೆ.
ಜಶೋದಾ ಬೇನ್ ಒಬ್ಬ ನಿವೃತ್ತ ಶಾಲಾ ಶಿಕ್ಷಕಿಯಾಗಿದ್ದು, ಅವರು ಬ್ರಹ್ಮನವಾಡಾದಲ್ಲಿ ವಾಸಿಸುತ್ತಿದ್ದಾರೆ ಎಂದು ಮೋದಿ ಅಫಿಡವಿಟ್ ಸಲ್ಲಿಸಿದ್ದಾರೆ. ಆದರೆ ಅಫಿಡವಿಟ್ ನಲ್ಲಿ ಪತ್ನಿಯ ಆಸ್ತಿ ವಿವರ ನಮೂದಿಸದ ಮೋದಿ, ಜಶೋದಾ ಬೇನ್ ಆದಾಯ, ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಮಾಹಿತಿ ತಮ್ಮ ಬಳಿ ಇಲ್ಲ ಎಂದು ಹೇಳಿದ್ದಾರೆ.
ಕಳೆದ ನಾಲ್ಕು ವಿಧಾನಸಭಾ ಚುನಾವಣೆಯಲ್ಲಿ 2001, 2002, 2007 ಮತ್ತು 12ರಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಕಾಲಂ ಅನ್ನು ಖಾಲಿ ಬಿಟ್ಟಿದ್ದ ಮೋದಿ, ಈ ಬಾರಿ ಅದನ್ನು ಭರ್ತಿ ಮಾಡಿದ್ದಾರೆ. ಇದರೊಂದಿಗೆ ಮೋದಿ ವಿವಾಹದ ಬಗ್ಗೆ ಹುಟ್ಟಿಕೊಂಡಿದ್ದ ವಿವಾದಕ್ಕೆ ತೆರೆ ಬಿದ್ದಿದೆ.
ಮೋದಿಯ ಆಸ್ತಿ ವಿವರ
ನರೇಂದ್ರ ಮೋದಿ ಬಳಿ 1.50 ಕೋಟಿ ರೂ ಆಸ್ತಿಯಿದೆ. 29,700 ರೂ ನಗದು, 44 ಲಕ್ಷ ರೂ ಬ್ಯಾಂಕ್ ಠೇವಣಿ, ಸುಮಾರು 4.5 ಲಕ್ಷ ರೂ ಮೌಲ್ಯದ ಬಾಂಡ್ ಗಳು, ಪ್ರಸ್ತುತ 1 ಕೋಟಿ ರೂ. ಮೌಲ್ಯದ ಮನೆ ಇದೆ ಎಂದು ಮೋದಿ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


