ಮಮತಾರದ್ದು ವೋಟ್ ಬ್ಯಾಂಕ್ ರಾಜಕಾರಣ: ಮೋದಿ

ಸಿಲಿಗುರಿ(ಪಶ್ಚಿಮಬಂಗಾಳ): ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಗುರುವಾರ ಆರೋಪಿಸಿದ್ದಾರೆ.
ಸಿಲಿಗುರಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಪಶ್ಚಿಮ ಬಂಗಾಳದಲ್ಲಿ ಈಗೀನ ಸರ್ಕಾರವನ್ನು ಬದಲಾಯಿಸಬೇಕು ಆಗ ಮಾತ್ರ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡದೆ ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ಹಿಂದಿನ ಚುನಾವಣಾ ಪ್ರಚಾರದ ವೇಳೆ ಮಮತಾ ಬ್ಯಾನರ್ಜಿ ಗುಜರಾತ್ ಗೋಧ್ರಾ ನರಮೇಧ ವಿಷಯವನ್ನು ಇಟ್ಟುಕೊಂಡು ಹಲವು ಬಾರಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಇಂದು ತಿರುಗೇಟು ನೀಡಿರುವ ಮೋದಿ, ನನ್ನನ್ನು ಟೀಕಿಸದಿದ್ದರೆ ಮಮತಾ ಬ್ಯಾನರ್ಜಿಗೆ ತಿಂದದ್ದು ಜೀರ್ಣವಾಗುವುದಿಲ್ಲ ಎಂದು ಲೇವಡಿ ಮಾಡಿದರು.
ಮುಖ್ಯಮಂತ್ರಿಗಳೇ ನೀವು ಎಷ್ಟೇ ಕೆಸರೆರಚಿದರು ಅದರಿಂದ ಕಮಲದ ಹೂವು ಅಷ್ಟು ಸಮೃದ್ಧಿಯಾಗಿ ಬೆಳೆಯುತ್ತದೆ. ಇಷ್ಟು ದಿನ ಸುಳ್ಳು ಪರಿವರ್ತನೆಯನ್ನು ನೋಡುತ್ತಿದ್ದೀರ ಆದರೆ ಈ ಸಲ ರಾಜ್ಯದಲ್ಲಿ ನಿಜವಾದ ಪರಿವರ್ತನೆಯಾಗಲಿದೆ ಎಂದರು.
ಈ ವೇಳೆ, ಬಹುಕೋಟಿ ಶಾರದ ಚಿಟ್ಫಂಡ್ ಹಗರಣದ ಕುರಿತಾಗಿ ಪ್ರಸ್ತಾಪಿಸಿದ ಮೋದಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳಿಗೆ ಕಂಡಿತ ಶಿಕ್ಷೆಯಾಗಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


