ಈಗಿನ ಸುದ್ದಿ

ತಾಯಿ, ಸಹೋದರನ ಪರ ಮಾತ್ರ ಪ್ರಚಾರ: ಪ್ರಿಯಾಂಕಾ ಗಾಂಧಿ

ತಾಯಿ, ಸಹೋದರನ ಪರ ಮಾತ್ರ ಪ್ರಚಾರ: ಪ್ರಿಯಾಂಕಾ ಗಾಂಧಿ
Published On :

ನವದೆಹಲಿ: ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಹೋದರ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪರ ಮಾತ್ರ ತಾವು ಚುನಾವಣಾ ಪ್ರಚಾರ ಮಾಡುವುದಾಗಿ ಪ್ರಿಯಾಂಕಾ ಗಾಂಧಿ ಅವರು ಗುರುವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ತಮ್ಮ ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, ತಮ್ಮ ಪರ ಪ್ರಚಾರಕ್ಕೆ ಬರುವಂತೆ ಇತರೆ ಕಾಂಗ್ರೆಸ್ ನಾಯಕರು ಕೇಳಿಕೊಂಡಿದ್ದಾರೆ. ಆದರೆ ನಾನು ನನ್ನ ತಾಯಿ ಮತ್ತು ಸಹೋದರನ ಪರ ಮಾತ್ರ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ.

ಉತ್ತರ ಪ್ರದೇಶದ ರಾಯ್‌ಬರೆಲಿ ಮತ್ತು ಅಮೇಠಿಯಲ್ಲಿ ಪ್ರಿಯಾಂಕಾ ಪ್ರಚಾರ ಕೈಗೊಂಡ ಬೆನ್ನಲ್ಲೆ, ತಮ್ಮ ಕ್ಷೇತ್ರಗಳಲ್ಲೂ ಪ್ರಚಾರ ಕೈಗೊಳ್ಳುವಂತೆ ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಪ್ರಿಯಾಂಕಾಗೆ ಮನವಿ ಮಾಡಿದ್ದರು. ಪ್ರಿಯಾಂಕಾ ಅವರು ತಮಗೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿರುವುದಾಗಿ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಹೇಳಿದ್ದರು. ಅಲ್ಲದೆ ವಡೋದರಾದಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿರುವ ಮಧುಸುದನ್ ಮಿಸ್ತ್ರಿ ಸಹ ಪ್ರಿಯಾಂಕಾ ಪ್ರಚಾರಕ್ಕೆ ಬಂದರೆ ತಾವು ಅವರಿಗೆ ಆಭಾರಿಯಾಗುವುದಾಗಿ ಹೇಳಿದ್ದರು.

ಇದೇ ವೇಳೆ ದೇಶದಲ್ಲಿ ಮೋದಿ ಅಲ್ಲೆ ಇಲ್ಲ ಎಂದು ಪ್ರಿಯಾಂಕಾ ಗಾಂಧಿ ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.