ಕಾಂಗ್ರೆಸ್‌ನಿಂದ ಸಮಾಜ ವಿಭಜನೆ: ಮೋದಿ

ಧಂತರಿ(ಛತ್ತೀಸ್‌ಗಡ): ಪ್ರತ್ಯೇಕ ರಾಜ್ಯ ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ಸಮಾಜ ವಿಭಜನೆ ಮಾಡುತ್ತಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಶುಕ್ರವಾರ ಆರೋಪಿಸಿದರು.
ಛತ್ತೀಸ್‌ಗಡದ ಧಂತರಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ತೆಲಂಗಾಣ ಪ್ರತ್ಯೇಕ ರಾಜ್ಯ ಘೋಷಣೆ ಮಾಡುವ ಮೂಲಕ ಸಮಾಜ ವಿಭಜನೆ ಮಾಡುತ್ತಿದೆ ಎಂದು ದೂರಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಉತ್ತರಖಂಡ್‌ನ್ನು ಪ್ರತ್ಯೇಕ ರಾಜ್ಯಗಳನ್ನಾಗಿ ಘೋಷಿಸಿದರು. ಇದರಿಂದ ಅಲ್ಲಿನ ಜನತೆಗೆ ಸಂತೋಷವಾಯಿತು. ಆದರೆ ಕಾಂಗ್ರೆಸ್ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಿತು. ಇದರಿಂದ ಏನು ಪ್ರಯೋಜನ ತೆಲಂಗಾಣದಲ್ಲಿ ಜನರು ಕಣ್ಣೀರಿಡುತ್ತಿದ್ದಾರೆ ಎಂದರು.
ದೇಶದಲ್ಲಿ ಬೆಲೆ ಏರಿಕೆಯಿಂದಾಗಿ ಬಡವರು, ಮಧ್ಯಮ ವರ್ಗದವರು ತೊಂದರೆ ಎದುರಿಸುತ್ತಿದ್ದರು. ಅದನ್ನು ನಿಯಂತ್ರಣಕ್ಕೆ ತರುವ ಕೆಲಸ ಕಾಂಗ್ರೆಸ್ ಮಾಡಿಲ್ಲ. ಕಳೆದ 2009ರ ಲೋಕಸಭಾ ಚುನಾವಣೆಯಲ್ಲೆ ಬೆಲೆ ಇಳಿಕೆಗೆ ಮಾಡಿವ ಭರವಸೆ ನೀಡಿದ್ದರು. ಆದರೆ ಐದು ವರ್ಷ ಕಳೆದರು ಇಲ್ಲಿಯವರೆಗೂ ಬೆಲೆ ಇಳಿಕೆಗೆ ಸೂಕ್ತ ಕ್ರಮಕೈಗೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಕಾಂಗ್ರೆಸ್‌ನಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.
ಕಳೆದ 10 ವರ್ಷದಿಂದ ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದೆ ಆದರೆ ದೇಶದಲ್ಲಿ ಯಾವ ಪ್ರಮಾಣದ ಅಭಿವೃದ್ಧಿಯಾಗಿದೆ ಎಂಬುದರ ಲೆಕ್ಕ ಕೊಡಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಶ್ನಿಸಿದರು. ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಅದಕ್ಕಾಗಿ ಕುಟುಂಬ ರಾಜಕಾರಣ ಮಾಡುತ್ತಿದೆ ಎಂದು ಮೋದಿ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


