ಮೋದಿ ಹಣಿಯಲು ವಾಜಪೇಯಿಯನ್ನು ಬಳಸಿಕೊಂಡ ಕಾಂಗ್ರೆಸ್

ನವದೆಹಲಿ: ಹೇಗಾದರೂ ಮಾಡಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ಹಣಿಯಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್, ಈ ಬಾರಿ ಮೋದಿ ವಿರುದ್ಧ ಅವರದ್ದೇ ಪಕ್ಷದ ಹಿರಿಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಳಸಿಕೊಂಡಿದೆ.
ಇಂದು ಕಾಂಗ್ರೆಸ್ನ ಅಧಿಕೃತ ವೆಬ್ಸೈಟ್ನಲ್ಲಿ, 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಪರಿಯನ್ನು ವಾಜಪೇಯಿ ಅವರ ಭಾವಚಿತ್ರದೊಂದಿಗೆ ಬಿಂಬಿಸಲಾಗಿದೆ.
'ಮೋದಿ ರಾಜಧರ್ಮವನ್ನು ಪಾಲಿಸುತ್ತಿಲ್ಲ. ಇದು ವಾಜಪೇಯಿ ಅವರ ನೋವಿಗೆ ಮೂಲ ಕಾರಣ' ಎಂದು ಕಾಂಗ್ರೆಸ್ ತನ್ನ ಜಾಹಿರಾತಿನಲ್ಲಿ ಹೇಳಿಕೊಂಡಿದೆ.
'ಸ್ವಲ್ಪ ವಿಚಾರ ಮಾಡಿ! ಈ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗಲೂ ಯೋಗ್ಯನಲ್ಲ ಎಂದು ಮಾಜಿ ಪ್ರಧಾನಿ ವಾಜಪೇಯಿ ಹೇಳಿದ್ದಾರೆ. ಅಂತಹ ವ್ಯಕ್ತಿಯ ಕೈಗೆ ನೀವು ದೇಶದ ಭವಿಷ್ಯ ಕೊಡುತ್ತಿರಾ?' ಎಂದು ಜಾಹಿರಾತಿನಲ್ಲಿ ಪ್ರಶ್ನಿಸಲಾಗಿದೆ.
ವಾಜಪೇಯಿ ಅವರು ಬಿಜೆಪಿಯ ಹಿರಿಯ ನಾಯಕರಾಗಿದ್ದು, 2006ರಲ್ಲಿ ಅವರು ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗಿದ್ದಾರೆ. ವಾಜಪೇಯಿ ಅವರು 1998ರಿಂದ 2004ರವರೆಗೆ ದೇಶದ ಪ್ರಧಾನಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


