ಈಗಿನ ಸುದ್ದಿ

ಅಮಿತ್ ಶಾ, ಅಜಂ ಖಾನ್ ವಿರುದ್ಧ ಎಫ್‌ಐಆರ್ ದಾಖಲು

ಅಮಿತ್ ಶಾ, ಅಜಂ ಖಾನ್ ವಿರುದ್ಧ ಎಫ್‌ಐಆರ್ ದಾಖಲು
Published On :

ಲಖನೌ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಅಮಿತ್ ಶಾ ಹಾಗೂ ಸಚಿವ ಅಜಂ ಖಾನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ.

ಚುನಾವಣಾ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆಪ್ತ ಅಮಿತ್ ಶಾ ಹಾಗು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಚಿವ ಅಜಂ ಖಾನ್ ವಿರುದ್ಧ ಇಂದು ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಇವರು, ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಈ ಇಬ್ಬರು ನಾಯಕ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನಿನ್ನೆ ಸೂಚಿಸಿತ್ತು. ಅಲ್ಲದೆ ಉತ್ತರ ಪ್ರದೇಶದಲ್ಲಿ ಈ ನಾಯಕರು ಸಭೆ ಸಮಾರಂಭ, ಸಾರ್ವಜನಿಕ ರ್ಯಾಲಿಗಳು ನಡೆಸದಂತೆ ನಿಷೇದ ಹೇರಿತ್ತು.

ಈ ಇಬ್ಬರು ನಾಯಕರು ಸಮುದಾಯದ ಕೋಮುಗಳ ಮಧ್ಯೆ ದ್ವೇಷ ಬಿತ್ತಿ ಗಲಭೆಗೆ ಪ್ರಚೋದಿಸುವಂತೆ ಭಾಷಣಗಳನ್ನು ಮಾಡುತ್ತಿದ್ದ ಬಗ್ಗೆ ಆರೋಪಿಸಲಾಗಿತ್ತು. ಅಲ್ಲದೆ ಅವರು ಮಾತನಾಡಿದ ದೃಶ್ಯಗಳನ್ನೊಳಗೊಂಡ ಸಿಡಿಗಳನ್ನು ಕೂಡ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿತ್ತು.

ಈ ಸಾಕ್ಷಿಗಳನ್ನು ಪರಿಶೀಲಿಸಿದ ಆಯೋಗ ಈ ಇಬ್ಬರು ನಾಯಕರಿಗೆ ಪ್ರಚಾರ ಭಾಷಣಕ್ಕೆ ನಿರ್ಬಂಧ ಹೇರಿತ್ತು ಮತ್ತು ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಪೊಲೀಸುರ ಈ ಇಬ್ಬರು ನಾಯಕರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಿದ್ದು, ಯಾವುದೇ ಕ್ಷಣದಲ್ಲಾದರು ಬಂಧಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.