ಬಳ್ಳಾರಿ: 8.52 ಕೋಟಿ ಹವಾಲಾ ಹಣದೊಂದಿಗೆ ರಾಮುಲು ಕರಪತ್ರ ಜಪ್ತಿ

ಬಳ್ಳಾರಿ: ಖಾಸಗಿ ಫೈನಾನ್ಶಿಯರ್ ಬಾಬುಲಾಲ್ ಅಲಿಯಾಸ್ ಚೋರ್ ಬಾಬುಲಾಲ್ ಮನೆಯ ಮೇಲೆ ಶನಿವಾರ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ, 8.52 ಕೋಟಿ ರುಪಾಯಿ ಹವಾಲಾ ಹಣ ವಶಪಡಿಸಿಕೊಂಡಿದ್ದಾರೆ.
ದಾಳಿಯ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಖಾಸಗಿ ಫೈನಾನ್ಶಿಯರ್ ಆಗಿರುವ ಬಾಬುಲಾಲ್ ಎಂಬುವವರ ಮನೆ ಮೇಲೆ ಇಂದು ಬೆಳಗ್ಗೆ ನಾವು ದಾಳಿ ನಡೆಸಿದ್ದು, ದಾಳಿಯ ವೇಳೆ 8.52 ಕೋಟಿ ನಗದು ಹಾಗೂ ಹಣದ ಜೊತೆ ಶ್ರೀರಾಮುಲು ಭಾವಚಿತ್ರವುಳ್ಳ ಕರ ಪತ್ರ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ 4.30 ಕೋಟಿ ಅಂಚೆ ಕಚೇರಿ ಠೇವಣಿ, 5 ಕೋಟಿ ಮೌಲ್ಯದ ವಿವಿಧ ಬ್ಯಾಂಕ್‌ಗಳ ಚೆಕ್‌ಗಳು ಹಾಗೂ ನೂರಾರು ಎಕರೆ ಜಮೀನಿಗೆ ಸಂಬಂಧಿಸಿದ ದಾಖಲೆಗಳು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಲೋಕಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳಿಗೆ ಹಂಚಲು ಈ ಹಣ ಸಂಗ್ರಹಿಸಲಾಗಿದ್ದು, ಹಣದ ಬಗ್ಗೆ ಮಾಹಿತಿ ನೀಡುವಂತೆ ಬಾಬುಲಾಲ್ ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಚುನಾವಣಾ ಸಮಯದಲ್ಲಿ ಹವಾಲಾ ಹಣ ಸಂಗ್ರಹ ಆರೋಪದ ಮೇಲೆ ಐಪಿಸಿ ಸೆಕ್ಷೆನ್ 171, (ಇ) 188ರಡಿ ಬಾಬು ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದಲ್ಲದೇ ಹೊಸಪೇಟೆಯಲ್ಲೂ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು, ಅಲ್ಲಿ ಮತ್ತೊಬ್ಬ ಫೈನಾನ್ಶಿಯರ್ ವಿಕ್ರಮ ಜೈನ್‌ಗೆ ಸೇರಿದ 1.22ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ.
ಇನ್ನು ಬಗ್ಗೆ ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು, ತಮಗೂ ಬಾಬುಲಾಲ್‌ಗೂ ಯಾವುದೇ ಸಂಬಂಧವಿಲ್ಲ. ಅಧಿಕಾರಿಗಳು ಅವರ ಮನೆ ಮೇಲೆ ದಾಳಿ ಮಾಡಿ ಹಣ ಜಪ್ತಿ ಮಾಡಿರುವುದು ಒಳ್ಳೆಯ ಕೆಲಸ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


