ಈಗಿನ ಸುದ್ದಿ

ಚುನಾವಣಾ ಆಯೋಗ ಕಾಂಗ್ರೆಸ್ ಕೈಗೊಂಬೆ: ಅಜಂಖಾನ್

ಚುನಾವಣಾ ಆಯೋಗ ಕಾಂಗ್ರೆಸ್ ಕೈಗೊಂಬೆ: ಅಜಂಖಾನ್
Published On :

ನವದೆಹಲಿ: ಉತ್ತರ ಪ್ರದೇಶದಲ್ಲಿ ಪ್ರಚಾರ ಮಾಡದಂತೆ ಕೇಂದ್ರ ಚುನಾವಣಾ ಆಯೋಗದಿಂದ ನಿಷೇಧಕ್ಕೆ ಒಳಗಾಗಿರುವ ಸಮಾಜವಾದಿ ಪಕ್ಷದ ಸಚಿವ ಅಜಂ ಖಾನ್, ಚುನಾವಣಾ ಆಯೋಗ ಕಾಂಗ್ರೆಸ್‌ನ ಅಣತಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಬರೀ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗಿದ್ದ ಅಜಂಖಾನ್ ನವದೆಹಲಿಯಲ್ಲಿಂದು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಅವರು, ಚುನಾವಣಾ ಆಯೋಗ ಕಾಂಗ್ರೆಸ್‌ನ ಕೈಗೊಂಬೆಯಾಗಿದ್ದು, ಕಾಂಗ್ರೆಸ್‌ನ ಅಣತಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ದೇಶದ ಸಮಗ್ರತೆ ಎಂದರೆ ಏನು? ಇದನ್ನು ಚುನಾವಣಾ ಆಯೋಗ ಸ್ಪಷ್ಟ ಪಡಿಸಬೇಕು ಇಲ್ಲದಿದ್ದರೆ ಚುನಾವಣಾ ಆಯೋಗದ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ.

ಇದೇ ವೇಳೆ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆಪ್ತ ಅಮಿತ್ ಶಾರ ಹೇಳಿಕೆಯನ್ನು ಹಾಗೂ ನನ್ನ ಹೇಳಿಕೆಯನ್ನು ಒಂದೇ ತಕ್ಕಡಿಯಲ್ಲಿ ಹಾಕಿ ತೂಗಬೇಡಿ ಎಂದು ಹೇಳಿದರು.

ಉತ್ತರಪ್ರದೇಶದಲ್ಲಿ ಎಸ್‌ಪಿ ಪಕ್ಷದ ಚುನಾವಣಾ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅಜಂಖಾನ್ ವಿರುದ್ಧ ಚುನಾವಣಾ ಆಯೋಗ ಕ್ರಮಕೈಗೊಂಡಿತ್ತು. ಉತ್ತರಪದೇಶದಲ್ಲಿ ಅಜಂಖಾನ್‌ರ ಸಭೆ ಸಮಾರಂಭಗಳಿಗೆ ಹಾಗೂ ಚುನಾವಣಾ ರ್ಯಾಲಿಗಳಿಗೆ ನಿಷೇಧ ಹೇರಿತ್ತು. ಅಲ್ಲದೆ ಈ ಸಂಬಂಧ ಅಜಂಖಾನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಉತ್ತರಪ್ರದೇಶದ ಪೊಲೀಸರಿಗೆ ಆದೇಶಿಸಿತ್ತು.

ಚುನಾವಣಾ ಆಯೋಗದ ಅಣತಿಯಂತೆ ನಿನ್ನೆ ಪೊಲೀಸರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಅಜಂಖಾನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.