ನನಗೆ ಆಶ್ರಯ ನೀಡಲು ಮೋದಿ ಯಾರು?: ದೇವೇಗೌಡ

ಹಾಸನ: ದೇವೇಗೌಡ್ರೆ, ಗುಜರಾತ್ಗೆ ಬನ್ನಿ ನಿಮಗೆ ಆಶ್ರಯ ಕಲ್ಪಿಸಿಕೊಡುತ್ತೇನೆ ಎಂಬ ಮೋದಿ ಹೇಳಿಕೆಗೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರು ತಿರುಗೇಟು ನೀಡಿದ್ದು, ನನಗೆ ಆಶ್ರಯ ನೀಡಲು ಮೋದಿ ಯಾರು? ಎಂದು ಪ್ರಶ್ನಿಸಿದ್ದಾರೆ.
ಇಂದು ಹಾಸನದ ಚನ್ನರಾಯಪಟ್ಟನದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾನು ಗುಜರಾತ್ಗೆ ಹೋಗುವ ಅವಶ್ಯಕತೆ ಇಲ್ಲ. ನನಗೆ ನಿಮ್ಮ ಆಶ್ರಯ ಬೇಕಿಲ್ಲ ಎಂದು ಖಡಕ್ಕಾಗಿ ಉತ್ತರಿಸಿದ್ದಾರೆ. ಅಲ್ಲದೆ ಆಶ್ರಯ ಕಲ್ಪಿಸುವುದೆ ಆದರೆ ಗುಜರಾತ್ನಲ್ಲಿ ಅಲ್ಪಸಂಖ್ಯಾತರಿಗೆ ನಿರಾಳವಾಗಿ ಬದುಕುವ ಅವಕಾಶ ಕಲ್ಪಿಸಿಕೊಡಿ ಎಂದರು.
ವಿದೇಶಗಳಲ್ಲಿ ಸ್ವತಂತ್ರವಾಗಿ ತಿರುಗಾಡುವ ಸ್ವಾಂತತ್ರ್ಯ ನನಗಿದೆ ಎಂದ ದೇವೇಗೌಡರು, ಮೋದಿಗೆ ವಿದೇಶಕ್ಕೆ ಹೋಗುವ ಅವಕಾಶವಿಲ್ಲ. ಒಬ್ಬ ಶ್ರೀಸಾಮಾನ್ಯನಿಗೆ ಇರುವ ಅರ್ಹತೆ ಕೂಡ ಮೋದಿಗೆ ಇಲ್ಲ ಎಂದು ಕಿಡಿಕಾರಿದರು.
ನರೇಂದ್ರ ಮೋದಿ ದೇಶದ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂಬ ದೇವೇಗೌಡರ ಹೇಳಿಕೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು. ಚಿಕ್ಕೂಬಳ್ಳಾಪುರದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ, ದೇವೇಗೌಡರೇ ನಾನು ನಿಮ್ಮ ಮಗನಿದ್ದಂತೆ, ನಾನು ಪ್ರಧಾನಿಯಾದ್ರೆ ನೀವು ಗುಜರಾತ್ಗೆ ಬನ್ನಿ, ಗುಜರಾತ್ನಲ್ಲಿ ನಾನು ನಿಮಗೆ ಎಲ್ಲಾ ವ್ಯವಸ್ಥೆ ಮಾಡಿಕೊಡುತ್ತೇನೆ. ನಿಮ್ಮ ಮಕ್ಕಳಿಗಿಂತ ಹೆಚ್ಚಾಗಿ ನಿಮ್ಮ ಸೇವೆ ಮಾಡ್ತೀನಿ. ನಿಮಗೆ ಯಾವುದೇ ಕಷ್ಟ ಬರದಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


