ಈಗಿನ ಸುದ್ದಿ

'ಗೃಹ ಸಚಿವರ ಜತೆ ರೌಡಿ ಶೀಟರ್' ಘಟನೆಗೆ ಪೊಲೀಸರ ವೈಫಲ್ಯ ಕಾರಣ: ಸಿಎಂ

'ಗೃಹ ಸಚಿವರ ಜತೆ ರೌಡಿ ಶೀಟರ್' ಘಟನೆಗೆ ಪೊಲೀಸರ ವೈಫಲ್ಯ ಕಾರಣ: ಸಿಎಂ
Published On :

ಬೆಂಗಳೂರು: ಗೃಹ ಸಚಿವ ಕೆ.ಜೆ.ಜಾರ್ಜ್ ಅವರೊಂದಿಗೆ ರೌಟಿ ಶೀಟರ್ ಬ್ರಿಗೇಡ್ ಅಜಂ ಪ್ರಚಾರ ಮಾಡಿದ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಿಎಂ, ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರು ಮೆಚ್ಚಿದ್ದಾರೆ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಹೀಗಾಗಿ ಮತದಾರ ನಮ್ಮ 'ಕೈ' ಹಿಡಿಯುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ರಾಜ್ಯದ 22 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದ್ದು, 18ರಿಂದ 20 ಕ್ಷೇತ್ರಗಳಲ್ಲಿ ನಮ್ಮ ಗೆಲುವು ಖಚಿತ ಎಂದು ಹೇಳಿದರು.

ಈ ವೇಳೆ ರೌಡಿ ಶೀಟರ್ ಬ್ರಿಗೇಡ್ ಅಜಂ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಘಟನೆಗೆ ಸಂಬಂಧಿಸಿದಂತೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಘಟನೆಗೆ ಪೊಲೀಸರ ವೈಫಲ್ಯ ಕಾರಣ. ಇದರಲ್ಲಿ ಕಾಂಗ್ರೆಸ್ ಪಕ್ಷದ್ದು, ಯಾವುದೇ ತಪ್ಪಿಲ್ಲ ಎಂದು ಸಿಎಂ ಸಮರ್ಥಿಸಿಕೊಂಡರು.

ಕಳೆದ ವಾರ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ತೆರೆದ ವಾಹನದಲ್ಲಿ ಪ್ರಚಾರ ಕೈಗೊಳ್ಳಲಾಗಿತ್ತು. ಈ ವೇಳೆ ರಿಜ್ವಾನ್ ಅರ್ಷದ್ ಜತೆ ಗೃಹ ಸಚಿವ ಜಾರ್ಜ್ ಹಾಗೂ ವಾರ್ತಾ ಸಚಿವ ರೋಷನ್ ಬೇಗ್ ಸಹ ಇದ್ದರು.

ಇದೇ ವೇಳೆ ಲೋಕಸಭೆ ಚುನಾವಣಾ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಮತ್ತು ಚುನಾವಣೆ ನಂತರ ಮುಖ್ಯಮಂತ್ರಿಯೂ ಬದಲಾಗುವುದಿಲ್ಲ, ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿದ್ದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.