ಈಗಿನ ಸುದ್ದಿ

ಲೋಕಸಮರಕ್ಕೆ ಪೊಲೀಸ್ ಇಲಾಖೆ ಸಜ್ಜು

ಲೋಕಸಮರಕ್ಕೆ ಪೊಲೀಸ್ ಇಲಾಖೆ ಸಜ್ಜು
Published On :

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯ ಪೊಲೀಸ್ ಇಲಾಖೆ ಸರ್ವಸಿದ್ಧತೆ ಮಾಡಿಕೊಂಡಿದ್ದು, ಬಿಗಿ ಭದ್ರತೆಯೊಂದಿಗೆ ಏಪ್ರಿಲ್ 17ರಂದು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದ ಮತದಾನ ನಡೆಯಲಿದೆ.

ಈ ಸಂಬಂಧ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಎನ್.ರೆಡ್ಡಿ ಅವರು, ಒಟ್ಟು 60 ಸಾವಿರ ವಿವಿಧ ದರ್ಜೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಬಂದೋಬಸ್ತ್‌ಗಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 54,294 ಮತಗಟ್ಟೆಗಳಿದ್ದು, ಈ ಪೈಕಿ 8,658 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು, 14,440 ಮತಗಟ್ಟೆಗಳನ್ನು ಸೂಕ್ಷ ಎಂದು ಮತ್ತು 38,196 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ.

40 ಕೆಎಸ್‌ಆರ್‌ಪಿ ತುಕಡಿ, 14,458 ಗೃಹ ರಕ್ಷಕ ದಳದ ಸಿಬ್ಬಂದಿ, 1200 ನಾಗರಿಕ ರಕ್ಷಣಾ ದಳ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗಿದೆ ಎಂದು ರೆಡ್ಡಿ ತಿಳಿಸಿದರು.

ಇನ್ನು ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಬೆಂಗಳೂರು ಕೇಂದ್ರ, ದಕ್ಷಿಣ, ಉತ್ತರ ಹಾಗೂ ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಭದ್ರತೆಗಾಗಿ 75 ಕೆಎಸ್ಆರ್ಪಿ ತುಕಡಿ, 11,236 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ತಿಳಿಸಿದ್ದಾರೆ.

61 ಎಸಿಪಿ, 120 ಪಿಐ, 430 ಪಿಎಸ್ಐ, 1049 ಎಎಸ್ಐ ಹಾಗೂ 9576 ಹೆಡ್ಕಾನ್ಸ್ಟೇಬಲ್, 1000 ರಕ್ಷಣಾ ದಳದ ಸಿಬ್ಬಂದಿ, 3144 ಸ್ವಯಂ ಸೇವಕರನ್ನು ನೇಮಿಸಲಾಗಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 6,823 ಮತಗಟ್ಟೆಗಳಿದ್ದು, ಈ ಪೈಕಿ 1361 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಹಾಗೂ 2044 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ ಮತ್ತು 186 ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಔರಾದ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.