ಈಗಿನ ಸುದ್ದಿ

ಎರಡು ಪ್ರತ್ಯೇಕ ಅಪಘಾತ: 11 ಸಾವು

ಎರಡು ಪ್ರತ್ಯೇಕ ಅಪಘಾತ: 11 ಸಾವು
Published On :

ಚಿತ್ರದುರ್ಗ, ಬೆಳಗಾವಿ: ಚಿತ್ರದುರ್ಗ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಎರಡು ಕಡೆ ಸಂಭವಿಸಿದ ಭೀಕರ ರಸ್ತೆ ಅಪಘಾತಗಳಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಬೆಳಗಿನ ಜಾವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಕುರ್ಕಿ ಬಳಿ ಖಾಸಗಿ ಬಸ್ಸೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವೇಗದ ತೀವ್ರತಗೆ ತಕ್ಷಣ ಬೆಂಕಿ ಹೊತ್ತಿಕೊಂಡು ಇಡೀ ಬಸ್ಸು ಸುಟ್ಟು ಕರಕಲಾಗಿದ್ದು, ಘಟನೆಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ.

ದಾವಣಗೆರೆಯಿಂದ ಬೆಂಗಳೂರಿಗೆ ಬರುತ್ತಿದ್ದ ಎಸ್‌ಪಿಆರ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಇದಾಗಿದ್ದು, ಇದರಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಾಲಕನ ಅಜಾಗರೂಕತೆಯೆ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಅಪಘಾತವಾಗುತ್ತಿದ್ದ ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಫಿರೋಜ್‌ನನ್ನು ಹಿರಿಯೂರು ಪೊಲೀಸರು ಬಂಧಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಮತ್ತು ಅಗ್ಮಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಗಳು ಭರದಿಂದ ನಡೆಯುತ್ತಿವೆ.

ಕ್ರೂಸರ್ ಪಲ್ಟಿ: 5 ಸಾವು
ಬೆಳಗಾವಿ ಜಿಲ್ಲೆ ಕಿತ್ತೂರಿನ ಉಡಿಕೇರಿ ಬಳಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಐವರು ದುರ್ಮರಣಕ್ಕಿಡಾಗಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟವರೆಲ್ಲ ಖಾನಾಪುರದ ಹಲಸಿ ಗ್ರಾಮದವರಾಗಿದ್ದು, ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗವೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಸುರೇಶ್ ಕೋಲಾಕರ್(42), ಲಕ್ಷ್ಮೀ ಕೋಲಾಕರ್ (38) ಭಾರತಿ ಕೋಲಾಕರ್(35), ರಾಜೀವ್ ಮೊಗರೆ (23) ಹಾಗೂ ಕಾಶಮ್ಮ(55) ಮೃತ ದುರ್ದೈವಿಗಳು.

ಸ್ಥಳಕ್ಕೆ ಕಿತ್ತೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.