ಈಗಿನ ಸುದ್ದಿ

ಬಿಜೆಪಿಯಲ್ಲಿ ಒನ್ ಮ್ಯಾನ್ ಶೋ: ಪ್ರಿಯಾಂಕಾ

ಬಿಜೆಪಿಯಲ್ಲಿ ಒನ್ ಮ್ಯಾನ್ ಶೋ: ಪ್ರಿಯಾಂಕಾ
Published On :

ರಾಯ್‌ಬರೇಲಿ: ಕಾಂಗ್ರೆಸ್ ತತ್ವಸಿದ್ಧಾಂತಗಳ ಮೇಲೆ ರೂಪುಗೊಂಡು ಪ್ರಚಾರ ನಡೆಸುತ್ತಿದ್ದರೆ ಬಿಜೆಪಿ ಆ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಒನ್ ಮ್ಯಾನ್ ಶೋ(ಏಕ ವ್ಯಕ್ತಿ ಪ್ರದರ್ಶನ) ನಡೆದಿದೆ ಎಂದು ಪ್ರಿಯಾಂಕಾ ಗಾಂಧಿ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿರುವ ಪ್ರಿಯಾಂಕಾ, ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕ್ಷೇತ್ರವಾದ ರಾಯ್‌ಬರೇಲಿಯಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷದ ತತ್ವಸಿದ್ಧಾಂತಗಳ ಮೇಲೆ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಈ ಆಧಾರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರೆ. ಬಿಜೆಪಿಯಲ್ಲಿ ನರೇಂದ್ರ ಮೋದಿಯವರನ್ನು ವೈಭವೀಕರಿಸಿ ಪ್ರಚಾರ ನಡೆಸುತ್ತಿದೆ ಎಂದು ಆರೋಪಿಸಿದರು.

ದೇಶ ಮತ್ತು ಸಮಾಜವನ್ನು ವಿಭಜಿಸಲು ಬಿಜೆಪಿ ಪ್ರಯತ್ನಸುತ್ತಿದೆ. ಆದರೆ ಕಾಂಗ್ರೆಸ್ ದೇಶವನ್ನು ಒಂದುಗೂಡಿಸಲು ಶ್ರಮಿಸುತ್ತಿದೆ. ಈ ಕ್ಷೇತ್ರ ಇಂದಿರಾಗಾಂಧಿಯವರ ಸ್ವಕ್ಷೇತ್ರವಾಗಿದ್ದು ಇಲ್ಲಿನ ಜನ ನಮ್ಮ ತಾಯಿಗೆ ಮತ ಹಾಕುತ್ತಾರೆ. ಮೊದಲಿನಿಂದಲೂ ಈ ಕ್ಷೇತ್ರ ಶಾಂತಿಯನ್ನು ಕಾಪಾಡಿಕೊಂಡು ಬಂದಿದೆ ಇನ್ನು ಮುಂದೆಯೂ ಹಾಗೇಯೆ ಮುಂದುವರೆಯತ್ತದೆ ಎಂದು ಬಹಿರಂಗ ಸಭೆಯಲ್ಲಿ ಪ್ರಿಯಾಂಕ ಹೇಳಿದ್ದರು.

ತಮ್ಮ ಸಹೋದರ ರಾಹುಲ್ ಗಾಂಧಿ ಪರ ಅಮೇಥಿ ಕ್ಷೇತ್ರ ಮತ್ತು ತಮ್ಮ ತಾಯಿಯ ರಾಯ್‌ಬರೇಲಿ ಕ್ಷೇತ್ರದ ಚುನಾವಣಾ ಪ್ರಚಾರದ ಹೊಣೆಯನ್ನು ಪ್ರಿಯಾಂಕ ಗಾಂಧಿ ವಹಿಸಿಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲೂ ಕೂಡ ಈ ಎರಡು ಕ್ಷೇತ್ರಗಳಲ್ಲಿ ಪ್ರಿಯಾಂಕಾ ಅವರೇ ಚುನಾವಣೆ ಪ್ರಚಾರ ನಿಭಾಯಿಸಿದ್ದರು. ನಿನ್ನೆ ವರಣ್ ಗಾಂಧಿ ವಿರುದ್ಧ ಹರಿಹಾಯ್ದಿದ್ದ ಪ್ರಿಯಾಂಕ ಇಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.