ಈಗಿನ ಸುದ್ದಿ

ನಿಷೇಧದಿಂದ ಅಮಿತ್ ಶಾಗೆ ವಿನಾಯಿತಿ

ನಿಷೇಧದಿಂದ ಅಮಿತ್ ಶಾಗೆ ವಿನಾಯಿತಿ
Published On :

ನವದೆಹಲಿ: ಪ್ರಚೋದನಕಾರಿ ಹೇಳಿಕೆ ನೀಡಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸದಂತೆ ನಿಷೇಧಕ್ಕೆ ಒಳಗಾಗಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶಾರಿಗೆ ಚುನಾವಣಾ ಆಯೋಗ ಶುಕ್ರವಾರ ವಿನಾಯಿತಿ ನೀಡಿದೆ.

ತಮ್ಮ ತಪ್ಪನ್ನು ಅರಿತ ಅಮಿತ್ ಶಾ ಚುನಾವಣಾ ಆಯೋಗಕ್ಕೆ ಮುಚ್ಚಳಿಕೆ ಪತ್ರವನ್ನು ಬರೆದಿದ್ದು, ಇನ್ನು ಮುಂದೆ ನನ್ನಿಂದ ಈ ರೀತಿಯ ಅಪರಾಧಗಳು ನಡೆಯುವುದಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅವರ ಮೇಲೆ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಿದೆ. ಇದೇ ರೀತಿ ನಿಷೇಧಕ್ಕೆ ಒಳಗಾಗಿದ್ದ ಮತ್ತೋರ್ವ ಸಮಾಜವಾದಿ ಪಕ್ಷದ ಸಚಿವ ಅಜಂಖಾನ್ ವಿರುದ್ಧ ವಿಧಿಸಲಾಗಿದ್ದ ನಿಷೇಧವನ್ನು ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ಉಭಯ ನಾಯಕರು ನಿಷೇಧ ತೆರವಿಗಾಗಿ ಸಲ್ಲಿಸಿದ್ದ ಮನವಿಗಳ ಕುರಿತು ಕಳೆದ ಎರಡು ದಿನಗಳಲ್ಲಿ ನಡೆದ ಸಭೆಯಲ್ಲಿ ಆಯೋಗವು ಅಮಿತ್ ಶಾ ಅವರು ಅಜಂ ಖಾನ್‌ರಂತಲ್ಲ ತಮ್ಮ ಭಾಷಣದ ಪ್ರಮಾದಕ್ಕೆ ಅಮಿತ್ ವಿಷಾದ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಅವಹೇಳನಕಾರಿ ಹಾಗೂ ವ್ಯಕ್ತಿಗತ ವಾಗ್ದಾಳಿಗಳನ್ನು ನಡೆಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿರುವ ಹಿನ್ನೆಲೆಯಲ್ಲಿ ಅವರಿಗೆ ಹೇರಿದ್ದ ನಿಷೇಧವನ್ನು ತೆರವುಗೊಳಿಸಿರುವುದಾಗಿ ಆಯೋಗ ಹೇಳಿದೆ.

ಉಭಯ ನಾಯಕರಾದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶಾ ಹಾಗೂ ಸಮಾಜವಾದಿ ಪಕ್ಷದ ಸಚಿವ ಅಜಂಖಾನ್ ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಚುನಾವಣಾ ಪ್ರಚಾರದ ವೇಳೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಚುನಾವಣಾ ಆಯೋಗ ಈ ಇಬ್ಬರು ನಾಯಕರ ವಿರುದ್ಧ ನಿಷೇಧ ಹೇರಿ, ಎಫ್‌ಐಆರ್ ದಾಖಲಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.