ಟಿಡಿಪಿ-ಬಿಜೆಪಿ ಮೈತ್ರಿ ಬಿಕ್ಕಟ್ಟು ಶಮನ

ಹೈದರಾಬಾದ್: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಟಿಡಿಪಿ ನಡುವಣ ಮೈತ್ರಿ ಬಿಕ್ಕಟ್ಟು ಶಮನಗೊಂಡಿದ್ದು, ಉಭಯ ಪಕ್ಷಗಳ ಮೈತ್ರಿ ಮುಂದುವರೆಯುತ್ತದೆ ಎಂದು ಶುಕ್ರವಾರ ಬಿಜೆಪಿ ಸ್ಪಷ್ಟಪಡಿಸಿದೆ.
ತೆಲುಗು ದೇಶಂ ಪಾರ್ಟಿ ಮತ್ತು ಭಾರತೀಯ ಜನತಾ ಪಾರ್ಟಿಯ ನಡುವೆ ಆಂಧ್ರಪ್ರದೇಶದಲ್ಲಿ ಚುನಾವಣಾ ಸೀಟು ಹಂಚಿಕೆ ಕುರಿತಾಗಿ ಬಿಕ್ಕಟ್ಟು ಏರ್ಪಟಿತ್ತು. ಈ ಬಗ್ಗೆ ಚರ್ಚಿಸಲು ಇಂದು ಬಿಜೆಪಿಯ ವಕ್ತಾರ ಪ್ರಕಾಶ್ ಜಾವಡೇಕರ್ ಅವರು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಬಿಕ್ಕಟ್ಟು ಶಮನವಾಗಿದ್ದು, ಬಿಜೆಪಿ ಮತ್ತು ಟಿಡಿಪಿ ನಡುವೆ ಮೈತ್ರಿ ಮುಂದೆಯುತ್ತದೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕೆ ಇಳಿಸುತ್ತಿಲ್ಲ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು ಆರೋಪಿಸಿದ್ದು, ರಾಜಂಪೇಟೆ ಲೋಕಸಭಾ ಕ್ಷೇತ್ರದಿಂದ ದಗ್ಗುಬಾಟಿ ಪುರಂದೇಶ್ವರಿ ಹಾಗೂ ನರಸಾಪುರಂ ಲೋಕಸಭಾ ಕ್ಷೇತ್ರದಿಂದ ಇಂಜಿನಿಯರಿಂಗ್ ಕಲಾಶಾಲ ಮುಖ್ಯಸ್ಥ ಗೋಕರಾಜು ರಂಗರಾಜು ಕಣಕ್ಕೆ ಇಳಿಸಬೇಕೆಂಬ ಬಿಜೆಪಿ ನಿರ್ಣಯದ ವಿರುದ್ಧ ಬಹಿರಂಗವಾಗಿ ತಮ್ಮ ಅಸಮದಾನ ವ್ಯಕ್ತ ಪಡಿಸಿದ್ದರು.
ರಾಜಂಪೇಟ ಕ್ಷೇತ್ರದಿಂದ ಪುರಂದೇಶ್ವರಿಯನ್ನು ಹೆಸರನ್ನು ಕಳೆದ ರಾತ್ರಿ ಬಿಜೆಪಿ ಅಂತಿಮಗೊಳಿಸುತ್ತಿದ್ದಂತೆ ಮೈತ್ರಿ ಮಾಡಿಕೊಂಡ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದೆ. ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡದೆ ಇದ್ದರೆ ಜನರು ನಮ್ಮ ತಿರಸ್ಕರಿಸುತ್ತಾರೆ ಎಂಬುದು ಚಂದ್ರಬಾಬುರ ವಾದವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


