ಈಗಿನ ಸುದ್ದಿ

ನಾನು ಆಯೋಗದ ಕ್ಷಮೆಯಾಚಿಸಲ್ಲ: ಅಜಂಖಾನ್

ನಾನು ಆಯೋಗದ ಕ್ಷಮೆಯಾಚಿಸಲ್ಲ: ಅಜಂಖಾನ್
Published On :

ಲಖನೌ: ಪ್ರಚೋದನಕಾರಿ ಹೇಳಿಕೆ ನೀಡಿ ಚುನಾವಣಾ ಆಯೋಗದಿಂದ ನಿಷೇಧಕ್ಕೆ ಒಳಗಾಗಿದ್ದ ಸಮಾಜವಾದಿ ಪಕ್ಷದ ಸಚಿವ ಅಜಂಖಾನ್ ನಾನು ಆಯೋಗದ ಕ್ಷಮೆಯಾಚಿಸುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಜಂಖಾನ್, ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದರು. ಆಯೋಗ ಕಾಂಗ್ರೆಸ್‌ನ ಅಣತಿಯಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ನಾನು ಯಾವುದೇ ಅಪರಾಧ ಮಾಡಿಲ್ಲ. ಹೀಗಾಗಿ ನಾನ್ಯಾಕೆ ಚುನಾವಣಾ ಆಯೋಗದ ಕ್ಷಮೆಯಾಚಿಸಬೇಕು? ಆಯೋಗವೇನು ಸುಪ್ರೀಂಕೋರ್ಟ್‌ಗಿಂತ ದೊಡ್ಡದೇ ಎಂದು ಪ್ರಶ್ನಿಸಿದ್ದಾರೆ.

ಆಯೋಗದ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್‌ಗೆ ಹೋಗುವುದಾಗಿ ಹೇಳಿರುವ ಅವರು, ನನಗೆ ಸುಪ್ರೀಂಕೋರ್ಟ್ ಮೇಲೆ ಸಂರ್ಪೂಣ ವಿಶ್ವಾಸವಿದ್ದು, ನನಗೆ ಅಲ್ಲಿ ನ್ಯಾಯ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಉತ್ತರಪ್ರದೇಶದ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶಾ ಹಾಗೂ ಸಮಾಜವಾದಿ ಪಕ್ಷದ ಸಚಿವ ಅಜಂಖಾನ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದರು. ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆ ಸಮಾರಂಭಗಳನ್ನು ನಡೆಸದಂತೆ ಆಯೋಗ ಉಭಯ ನಾಯಕರ ವಿರುದ್ಧ ನಿಷೇಧ ಹೇರಿತ್ತು.

ತಮ್ಮ ತಪ್ಪನ್ನು ಅರಿತ ಅಮಿತ್ ಶಾ ಚುನಾವಣಾ ಆಯೋಗಕ್ಕೆ ಮುಚ್ಚಳಿಕೆ ಪತ್ರ ಬರೆದಿದ್ದು, ಮುಂದಿನ ದಿನಗಳಲ್ಲಿ ಅವಹೇಳನಕಾರಿ ಹಾಗೂ ವ್ಯಕ್ತಿಗತ ವಾಗ್ದಾಳಿಗಳನ್ನು ನಡೆಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಆಯೋಗ ಅಮಿತ್ ಶಾರ ಮೇಲಿನ ನಿಷೇಧವನ್ನು ಹಿಂಪಡೆದಿತ್ತು. ಈ ಹಿನ್ನಲೆಯಲ್ಲಿ ಆಯೋಗದ ಅಜಂ ಖಾನ್ ಕ್ಷಮೆಯಾಚಿಸಿದರೆ ನಿಷೇಧ ಹಿಂಪಡೆಯಲಾಗುವುದು ಎಂದು ಹೇಳಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.