ಸುಪ್ರಿಯಾಗೆ ಮತ ಹಾಕದಿದ್ದರೆ ಕರೆಂಟ್ ಕಟ್: ಅಜಿತ್ ಪವಾರ್

ಪುಣೆ: ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಎನ್ಸಿಪಿ ಅಭ್ಯರ್ಥಿ ಸುಪ್ರಿಯಾ ಸುಲೆ ಅವರಿಗೆ ಮತ ನೀಡದೆ ಇದ್ದರೆ ಗ್ರಾಮಕ್ಕೆ ನೀರು ಸರಬರಾಜು ಸ್ಥಗಿತಗೊಳಿಸುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಲೆಗೆ ಮತ ನೀಡಬೇಕು ಎಂದು ಬಾರಾಮತಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಮಸಲ್ವಾಡಿ ಗ್ರಾಮದಲ್ಲಿ ಏಪ್ರಿಲ್ 16 ರಂದು ಚುನಾವಣಾ ಪ್ರಚಾರ ಸಭೆಯಲ್ಲಿ ಅಜಿತ್ ಪವಾರ್, ಗ್ರಾಮಸ್ಥರಿಗೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಎಎಪಿ ಅಭ್ಯರ್ಥಿ ಸುರೇಶ್ ಖೋರ್ಪಡೆ ನಿನ್ನೆ ವಡಗಾಂವ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಸಲ್ವಾಡಿ ಗ್ರಾಮದಲ್ಲಿ ಸುಲೆ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪವಾರ್ ಅವರು, ಈ ಗ್ರಾಮದ ಯಾರಾದರೂ ಏನಾದರೂ ತೊಂದರೆ ಮಾಡಿದಲ್ಲಿ ಸುಲೆ ಅವರಿಗೆ ಮತ ನೀಡಲು ವಿಫಲರಾದಲ್ಲಿ ನಾನು ನೀರು ಸರಬರಾಜನ್ನು ಸ್ಥಗಿತಗೊಳಿಸುತ್ತೇನೆ ಎಂಬ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಅಸಮರ್ಪಕ ನೀರು ಸರಬರಾಜು ಕುರಿತು ಗ್ರಾಮಸ್ಥರು ದೂರಿದ್ದರಿಂದ ಇದಕ್ಕೆ ಪ್ರತಿಯಾಗಿ ಪವಾರ್ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಖೋರ್ಪಡೆ ಅವರ ದೂರಿನನ್ವಯ ಪ್ರತಿಕ್ರಿಯಿಸಿರುವ ಉಪ ಪೊಲೀಸ್ ಅಧಿಕಾರಿ ವಿಲಾಸ್ ಭೋಸಲೆ ಅವರು, ಖೋರ್ಪಡೆ ನೀಡಿರುವ ದೂರು ಲಭಿಸಿದೆ. ಆದರೆ ಉಪಮುಖ್ಯಮಂತ್ರಿ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಾಸ್ತವವಾಗಿ ಇದು ಚುನಾವಣಾ ನೀತಿ ಸಂಹಿತೆ ಮತ್ತು ಚುನಾವಣಾ ಪ್ರಚಾರಕ್ಕೆ ಸಂಬಂಧಪಟ್ಟ ವಿಚಾರವಾದ್ದರಿಂದ ಖೋರ್ಪಡೆ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ದೂರು ಸಲ್ಲಿಸಿದ್ದು, ಪವಾರ್ ವಿರುದ್ಧ ದೂರು ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಆಯೋಗ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


