ಈಗಿನ ಸುದ್ದಿ

ಮೇ.24ರಂದು ಹಾಜಾರಾಗುವಂತೆ ಕೇಜ್ರಿವಾಲ್‌ಗೆ ಕೋರ್ಟ್ ಸೂಚನೆ

ಮೇ.24ರಂದು ಹಾಜಾರಾಗುವಂತೆ ಕೇಜ್ರಿವಾಲ್‌ಗೆ ಕೋರ್ಟ್ ಸೂಚನೆ
Published On :

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಮೇ.24ರಂದು ನ್ಯಾಯಾಲಯಕ್ಕೆ ಹಾಜಾರಾಗುವಂತೆ ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್ ಶನಿವಾರ ಆದೇಶಿಸಿದೆ.

ಆಮ್ ಆದ್ಮಿ ಪಕ್ಷ ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಆಪ್‌ನ ಮೂವರು ನಾಯಕರು ಮೇ.24 ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಇಲ್ಲವಾದಲ್ಲಿ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಮೂರ್ತಿ ಸುನಿಲ್ ಕುಮಾರ್ ಶರ್ಮಾ ಸೂಚಿಸಿದ್ದಾರೆ.

ಕೇಂದ್ರ ಟೆಲಿಕಾಂ ಸಚಿವ ಕಪಿಲ್ ಸಿಬಲ್ ಪುತ್ರ ಹಾಗೂ ವಕೀಲ ಅಮಿತ್ ಸಿಬಲ್ ಅವರು ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಮೂರ್ತಿ ಸುನಿಲ್ ಕುಮಾರ್ ಶರ್ಮಾ ಅವರು, ವಿಚಾರಣೆಗಾಗಿ ಅರವಿಂದ್ ಕೇಜ್ರಿವಾಲ್, ಮನೀಷ್ ಸಿಸೋಡಿಯಾ, ಪ್ರಶಾಂತ್ ಭೂಷಣ್ ಮತ್ತು ಶಾಜಿಯಾ ಇಲ್ಮಿ ನ್ಯಾಯಾಲಯದ ಮುಂದೆ ಮೇ 24ರೊಳಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.