ಪಕ್ಷದ ಹಿತಾಸಕ್ತಿಗೆ ಧಕ್ಕೆ ತರುವ ಹೇಳಿಕೆಯಿಂದ ದೂರವಿರಿ: ರಾಜ್ನಾಥ್

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಸ್ಪರ್ಥಿಸಿಕೊಳ್ಳುವ ಭರಾಟೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ, ಬಿಹಾರದ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಭಾನುವಾರ ಕಿಡಿಕಾರಿದ್ದಾರೆ.
ಇದು ಜಾತ್ಯಾತೀತ ರಾಷ್ಟ್ರ ಇಲ್ಲಿ ದೇಶದ್ರೋಹಿ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಇದು ಪಕ್ಷದ ಹಿತಾಸಕ್ತಿಗೆ ಧಕ್ಕೆ ತರುತ್ತದೆ ಇನ್ನು ಮುಂದೆ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಗಿರಿರಾಜ್ ಸಿಂಗ್, ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ವಿರೋಧಿಸುವವರಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಬಿಹಾರದ ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮೋದಿಯನ್ನು ಪ್ರಧಾನಿಯನ್ನಾಗಿ ನೋಡಲು ಇಚ್ಛಿಸದವರಿಗೆ ಭಾರತದಲ್ಲಿ ಜಾಗವಿಲ್ಲ. ಅಂತಹವರಿಗೆ ಪಾಕಿಸ್ತಾನದಲ್ಲಿ ಮಾತ್ರ ಜಾಗವಿದೆ ಎಂದು ಹೇಳಿದ್ದರು.
ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ಮುಂದೆಯೇ ಇಂತಹ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ರಾಜಕೀಯದಲ್ಲಿ ಕೋಲಾಹಲಕ್ಕೆ ದಾರಿ ಮಾಡಿಕೊಟ್ಟಂತಾಗಿದೆ.
ಮೋದಿ ಪ್ರಧಾನಿಯಾಗವುದನ್ನು ಯಾರ್ಯಾರು ತಡೆಯುತ್ತಾರೋ ಅವರಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಗಿರಿರಾಜ್ ಹೇಳಿಕೆಯನ್ನು ಟೀಕಿಸಿರುವ ಕಾಂಗ್ರೆಸ್, ಚುನಾವಣಾ ಆಯೋಗ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


