ಈಗಿನ ಸುದ್ದಿ

ಪ್ರಚೋದನಕಾರಿ ಭಾಷಣ: ಗಿರಿರಾಜ್ ಸಿಂಗ್ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಭಾಷಣ: ಗಿರಿರಾಜ್ ಸಿಂಗ್ ವಿರುದ್ಧ ಎಫ್‌ಐಆರ್
Published On :

ನವದೆಹಲಿ: ಪ್ರಚೋದನಕಾರಿ ಭಾಷಣ ಹಿನ್ನೆಲೆಯಲ್ಲಿ ಬಿಹಾರದ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಚುನಾವಣಾ ಆಯೋಗ ಭಾನುವಾರ ಎಫ್‌ಐಆರ್ ದಾಖಲಿಸಿದೆ.

ಮತ್ತೊಂದೆಡೆ ತಮ್ಮ ಹೇಳಿಕೆಗೆ ಹೈಕಮಾಂಡ್‌ನಿಂದಲೂ ವಿರೋಧ ವ್ಯಕ್ತವಾದರು ತಲೆ ಕೆಡಿಸಿಕೊಳ್ಳದ ಗಿರಿರಾಜ್ ಸಿಂಗ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿರುವವರೆಲ್ಲರೂ ಶತ್ರುರಾಷ್ಟ್ರ ಪಾಕಿಸ್ತಾನದ ಮೇಲೆ ಮೃಧು ಧೋರಣೆ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ನಿನ್ನೆ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಗಿರಿರಾಜ್ ಸಿಂಗ್, ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ವಿರೋಧಿಸುವವರಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಬಿಹಾರದ ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮೋದಿಯನ್ನು ಪ್ರಧಾನಿಯನ್ನಾಗಿ ನೋಡಲು ಇಚ್ಛಿಸದವರಿಗೆ ಭಾರತದಲ್ಲಿ ಜಾಗವಿಲ್ಲ. ಅಂತಹವರಿಗೆ ಪಾಕಿಸ್ತಾನದಲ್ಲಿ ಮಾತ್ರ ಜಾಗವಿದೆ ಎಂದು ಹೇಳಿದ್ದರು.

ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ಮುಂದೆಯೇ ಇಂತಹ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು.

ಮೋದಿ ಪ್ರಧಾನಿಯಾಗವುದನ್ನು ಯಾರ್ಯಾರು ತಡೆಯುತ್ತಾರೋ ಅವರಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಗಿರಿರಾಜ್ ಹೇಳಿಕೆಯನ್ನು ಟೀಕಿಸಿರುವ ಕಾಂಗ್ರೆಸ್, ಚುನಾವಣಾ ಆಯೋಗ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿತ್ತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.