ಈಗಿನ ಸುದ್ದಿ

ತೃತೀಯ ರಂಗದೊಡನೆ ಕೈ ಜೋಡಿಸುವ ಬಗ್ಗೆ ಯೋಚಿಸಿಲ್ಲ: ಶರದ್ ಪವಾರ್

ತೃತೀಯ ರಂಗದೊಡನೆ ಕೈ ಜೋಡಿಸುವ ಬಗ್ಗೆ ಯೋಚಿಸಿಲ್ಲ: ಶರದ್ ಪವಾರ್
Published On :

ಮುಂಬೈ: ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಊಹಾಪೋಹಗಳ ನಡುವೆಯೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸಾರ್ವತ್ರಿಕ ಚುನಾವಣೆಯಲ್ಲಿ ಯುಪಿಎ ಒಕ್ಕೂಟ ಬಹುಮತಗಳಿಸಲು ಅಸಮರ್ಥವಾದರೆ ತಾವು ತೃತೀಯ ರಂಗದೊಂದಿಗೆ ಕೈ ಜೋಡಿಸಲ್ಲ ಎಂದು ಹೇಳಿದ್ದಾರೆ.

ಆದಾಗ್ಯೂ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಒಕ್ಕೂಟಗಳು ಬಹುಮತ ಪಡೆದು ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪವಾರ್, ತಾವು ತೃತೀಯರಂಗದೊಂದಿಗೆ ಕೈ ಜೋಡಿಸುವ ಬಗ್ಗೆ ಯೋಚಿಸಿಲ್ಲ ಎಂದು ಹೇಳಿದ್ದಾರೆ.

ಈ ಕ್ಷಣದ ವರೆಗೆ ತೃತೀಯರಂಗವೆಂಬುದೇ ಇಲ್ಲ. ಚುನಾವಣೆಯ ನಂತರ ಹೀಗೊಂದು ರಂಗ ಸೃಷ್ಟಿಯಾಗಬಹುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.