ಈಗಿನ ಸುದ್ದಿ

ಬೆಂ.ವಿವಿಯಲ್ಲಿ ಗೋಲ್‌ಮಾಲ್: ಆರೋಪಿ ಡಾ.ಕೊಟ್ರಯ್ಯ ವಶಕ್ಕೆ

ಬೆಂ.ವಿವಿಯಲ್ಲಿ ಗೋಲ್‌ಮಾಲ್: ಆರೋಪಿ ಡಾ.ಕೊಟ್ರಯ್ಯ ವಶಕ್ಕೆ
Published On :

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಫೇಲ್ ಆದ ವಿದ್ಯಾರ್ಥಿಗಳನ್ನು ಹಣ ಕೊಟ್ಟು ಪಾಸ್ ಮಾಡಿಸುವ ದಂಧೆಯಲ್ಲಿ ಶಾಮೀಲಾಗಿದ್ದ ಸಿಂಡಿಕೇಟ್ ಮಾಜಿ ಸದಸ್ಯ ವೇದಮೂರ್ತಿ ಅವರ ಬಂಧನದ ನಂತರ ಇದೀಗ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಹಣ ಕೊಟ್ಟರೆ ಪಾಸ್ ಮಾಡುವ ಈ ಅವ್ಯವಹಾರದಲ್ಲಿ ರಾಜಾಜಿನಗರ ಪದವಿ ಕಾಲೇಜಿನ ಉಪನ್ಯಾಸಕ ಡಾ. ಕೊಟ್ರೇಶ್ ಭಾಗಿಯಾಗಿದ್ದು, ಅವರನ್ನು ಪೊಲೀಸರು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಅವ್ಯವಹಾರದಲ್ಲಿ ಮೊದಲು ಬಂಧನಕ್ಕೊಳಗಾದ ವೇದಮೂರ್ತಿ ಕೆಜೆಪಿ ಮುಖಂಡನೂ ಆಗಿದ್ದಾರೆ. ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಂದ ಲಕ್ಷಾಂತರ ಹಣ ಪಡೆದು ಮಾರ್ಕ್ ಲಿಸ್ಟ್ ತಿದ್ದುಪಡಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.