ಈಗಿನ ಸುದ್ದಿ

ಶಕುಂತಲಾ ಬಂಗಾರಪ್ಪ ನಿಧನ

ಶಕುಂತಲಾ ಬಂಗಾರಪ್ಪ ನಿಧನ
Published On :

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ಅವರು ಮಂಗಳವಾರ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಕುಂತಲಾ ಬಂಗಾರಪ್ಪ ಅವರನ್ನು ಕೆಲ ದಿನಗಳ ಹಿಂದೆ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

78 ವರ್ಷದ ಶಕುಂತಲಾ ಬಂಗಾರಪ್ಪ ಅವರು ಇಬ್ಬರು ಪುತ್ರರನ್ನು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಶಾಸಕ ಮಧು ಬಂಗಾರಪ್ಪ ಶಕುಂತಲಾ ಅವರ ಪುತ್ರರು.

ಇತ್ತೀಚಿಗಷ್ಟೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆ ವೇಳೆ ಶಕುಂತಲಾ ಬಂಗಾರಪ್ಪ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ತಮ್ಮ ಪುತ್ರಿ ಗೀತಾ ಶಿವರಾಜ್‌ಕುಮಾರ್ ಅವರ ಪರ ಪ್ರಚಾರ ಮಾಡಿದ್ದರು.

ನಾಳೆ ಸೊರಬದಲ್ಲಿ ಅಂತ್ಯಸಂಸ್ಕಾರ
ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ನಾಳೆ ಬಂಗಾರಪ್ಪ ಅವರ ಸಮಾಧಿ ಬಳಿಯೇ ಶಕುಂತಲಾ ಬಂಗಾರಪ್ಪ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.