ಈಗಿನ ಸುದ್ದಿ

ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ನಿಧನ

ಜೆಡಿಎಸ್  ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ನಿಧನ
Published On :

ಬೆಂಗಳೂರು: ಜನತಾದಳ (ಜಾತ್ಯಾತೀತ) ಪಕ್ಷ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಚಿವ ಎ.ಕೃಷ್ಣಪ್ಪ ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದು, ಅವರಿಗೆ 65 ವರ್ಷ ವಯಸ್ಸಾಗಿತ್ತು.

ಇಂದು ಸಂಜೆ ಶಟ್ಲ್ ಕಾಕ್ ಆಡುವಾಗ ಕೃಷ್ಣಪ್ಪ ಅವರಿಗೆ ಹೃದಯಾಘಾತವಾಗಿ ಅವರು ಕೂಡಲೆ ಕುಸಿದು ಬಿದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೆ.ಆರ್.ಪುರಂನಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕೃಷ್ಣಪ್ಪ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಆದಾಗಲೇ ಅವರು ಸಾವನ್ನಪ್ಪಿರುವುದಾಗಿ ತಿಳಿಸಿದರು.

ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನವರಾದ ಕೃಷ್ಣಪ್ಪ ಅವರು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ಪದವಿ ಪಡೆದಿದ್ದರು. ತದ ನಂತರ ರಾಜಕೀಯ ಪ್ರವೇಶಿಸಿದ ಕೃಷ್ಣಪ್ಪ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎ.ಕೃಷ್ಣಪ್ಪ ಅವರು ಟಿಕೆಟ್ ಸಿಗದಿದ್ದರಿಂದ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನೈತಿಕ ಜವಾಬ್ದಾರಿ ಹೊತಿದ್ದ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ಥಾನವನ್ನು ತ್ಯಜಿಸಿದ್ದರು. ಬಳಿಕ ಸೆಪ್ಟೆಂಬರ್‌ನಲ್ಲಿ ಕೃಷ್ಣಪ್ಪ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು. ಈ ಹಿಂದೆ ನಡೆದ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿಯೂ ಕೃಷ್ಣಪ್ಪ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅವರ ಮಗಳು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರಾಗಿದ್ದು, ಈಗಲೂ ಅವರು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರೆದಿದ್ದಾರೆ.

ಮೂಲಗಳ ಪ್ರಕಾರ ಕೃಷ್ಣಪ್ಪ ಅವರು ಸಕ್ಕರೆ ಖಾಯಿಲೆ, ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಖಾಯಿಲೆ ಬಳಲುತಿದ್ದರು. ಈ ಹಿಂದೆ ವೈದ್ಯರು ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುಲು ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಫಲಿತಾಂಶ ಬರುವ ಮೊದಲೇ ಅವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ನಿವಾಸಕ್ಕೆ ರವಾನಿಸಲಾಗಿದೆ. ನಾಳೆ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.­­

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.