ಈಗಿನ ಸುದ್ದಿ

ಗಿರಿರಾಜ್ ಸಿಂಗ್‌ಗೆ ನಿರೀಕ್ಷಣಾ ಜಾಮೀನು

ಗಿರಿರಾಜ್ ಸಿಂಗ್‌ಗೆ ನಿರೀಕ್ಷಣಾ ಜಾಮೀನು
Published On :

ಪಾಟ್ನಾ: ವಿವಾದಾತ್ಮಕ ಹೇಳಿಕೆ ನೀಡಿ ಬಂಧನ ಭೀತಿ ಎದುರಿಸುತ್ತಿದ್ದ ಬಿಹಾರ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಏಪ್ರಿಲ್ 19ರಂದು ಜಾರ್ಖಂಡ್ ನ ಡಿಯೋಘರ್ ಜಿಲ್ಲೆಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗಿರಿರಾಜ್ ಸಿಂಗ್ ಅವರು, ನರೇಂದ್ರ ಮೋದಿ ಅವರನ್ನು ದ್ವೇಷಿಸುವವರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದರು. ಗಿರಿರಾಜ್ ಸಿಂಗ್ ಅವರ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದಲ್ಲದೇ, ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿರಾಜ್ ಸಿಂಗ್ ವಿರುದ್ಧ ಏಪ್ರಿಲ್ 21ರಂದು ಪಾಟ್ನಾ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಗಿರಿರಾಜ್ ಸಿಂಗ್ ಅವರು ಬಿಹಾರದ ಮಾಜಿ ಸಚಿವರು ಕೂಡ ಆಗಿದ್ದು ಅವರ ವಿರುದ್ಧ ಐಪಿಸಿ ಸೆಕ್ಷನ್ ಮತ್ತು 1950 ಸಾರ್ವಜನಿಕ ಪ್ರಾತಿನಿಧ್ಯ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿತ್ತು. 'ತಾವು ಯಾವುದೇ ಜನಾಂಗ ಅಥವಾ ಧರ್ಮವನ್ನು ಉದ್ದೇಶಿಸಿ ಈ ಮಾತುಗಳನ್ನು ಆಡಿಲ್ಲ' ಎಂದು ಗಿರಿರಾಜ್ ಸಿಂಗ್ ಅವರ ಪರ ವಕೀಲ ಜನಾರ್ಧನ್ ರಾಯ್ ಅವರು ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಲಯ ಗಿರಿರಾಜ್ ಸಿಂಗ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.