ಈಗಿನ ಸುದ್ದಿ

ರಾಜೀವ್ ಹಂತಕರಿಗಿಲ್ಲ ರಿಲೀಫ್:ಪ್ರಕರಣ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ

ರಾಜೀವ್ ಹಂತಕರಿಗಿಲ್ಲ ರಿಲೀಫ್:ಪ್ರಕರಣ ಸಾಂವಿಧಾನಿಕ ಪೀಠಕ್ಕೆ  ವರ್ಗಾವಣೆ
Published On :

ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದೆ. ಅಲ್ಲದೆ ಅಂತಿಮ ತೀರ್ಪು ಬರುವವರೆಗೆ ಹಂತಕರನ್ನು ಬಿಡುಗಡೆ ಮಾಡದಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.

7 ಮಂದಿ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಮುಂದಾಗಿದ್ದ ತಮಿಳುನಾಡು ಸರ್ಕಾರದ ನಿರ್ಧಾವರನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಸುಪ್ರೀಂ ಪೀಠ, ಪ್ರಕರಣವನ್ನು ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದೆ.

ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ರಾಜೀವ್ ಹಂತಕರಾದ ಮುರುಗನ್, ಸಂತಾನ್ ಮತ್ತು ಪೆರಾರಿವೇಲನ್ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗಿಳಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ 7 ಮಂದಿ ಹಂತಕರನ್ನು ಬಿಡುಗಡೆಗೊಳಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿತ್ತು. ತಮಿಳುನಾಡು ಸರ್ಕಾರದ ಕ್ರಮ ಖಂಡಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.