'ಮೋದಿ ದೇವರಲ್ಲವೇ': ಸಿಬಲ್ ವ್ಯಂಗ್ಯ

ನವದೆಹಲಿ: 'ಗಂಗೆಯನ್ನು ಸ್ವಚ್ಛಗೊಳಿಸುವ ನರೇಂದ್ರ ಮೋದಿ ದೇವರಲ್ಲವೇ' ಎಂದು ಕೇಂದ್ರ ಸಚಿವ ಕಪಿಲ್ ಸಿಬಲ್ ವ್ಯಂಗ್ಯವಾಡಿದ್ದಾರೆ.
ನಿನ್ನೆ ವಾರಣಾಸಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಮಾಡಿದ್ದ ಭಾಷಣದ ಬಗ್ಗೆ ಕೇಂದ್ರ ಸಚಿವ ಕಪಿಲ್ ಸಿಬಲ್ ಅವರು ವ್ಯಂಗ್ಯವಾಡಿದ್ದು, ನರೇಂದ್ರ ಮೋದಿ ಅವರ ವಿರುದ್ಧ ಕಿಡಿ ಕಾರಿದ್ದಾರೆ.
"Kehte hai Ganga swachh kar dengey, yeh haath lagaengey aur Ganga saaf ho jayegi, bhagwan hai na"
'ತಮ್ಮನ್ನು ಮಾತೆ ಗಂಗಾ ಕರೆದಿದ್ದು, ನಾನು ಆಕೆಯನ್ನು ಸ್ವಚ್ಛಗೊಳಿಸಲು ಬಂದಿದ್ದೇನೆ. ನಾನು ಕೈ ಇಟ್ಟೊಡನೆಯೇ ಗಂಗಾ ಸ್ವಚ್ಛವಾಗುತ್ತಾಳೆ ಎಂದು ಹೇಳಿದ್ದಾರೆ. ಕೈ ಇಟ್ಟೊಡನೆಯೇ ಗಂಗೆ ಸ್ವಚ್ಛವಾಗಲು ಅವರು ದೇವರಲ್ಲವೇ' ಎಂದು ಸಿಬಲ್ ವ್ಯಂಗ್ಯವಾಡಿದ್ದಾರೆ.
ನಿನ್ನೆ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು, ಬೃಹತ್ ರ್ಯಾಲಿ ಮೂಲಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದಕ್ಕೂ ಮೊದಲು ಮಾತನಾಡಿದ್ದ ನರೇಂದ್ರ ಮೋದಿ ಅವರು ತಮ್ಮನ್ನು ಜನಸೇವೆ ಮಾಡಲು ಮಾತೆ ಗಂಗಾ ಇಲ್ಲಿಗೆ ಕರೆತಂದಿದ್ದು, ಗಂಗೆಯನ್ನು ಶುದ್ದೀಕರಿಸಲು ತುಂಬಾ ಕೆಲಸ ಮಾಡಬೇಕಿದೆ. ಗಂಗೆಯನ್ನು ನಾನು ಸಾಬರಮತಿ ಮಾಡುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


