ಸಹೋದರ ಬಿಜೆಪಿ ಸೇರ್ಪಡೆಗೆ ಪ್ರಧಾನಿ ಸಿಂಗ್ ವಿಷಾದ

ನವದೆಹಲಿ: ತಮ್ಮ ಮಲತಮ್ಮ ದಲ್ಜೀತ್ ಸಿಂಗ್ ಕೊಹ್ಲಿ ಬಿಜೆಪಿ ಸೇರ್ಪಡೆಯಾಗಿರುವುದು ತಮಗೆ ಅಗಾಧ ನೋವು ತಂದಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ನನ್ನ ಸಹೋದರನ ನಿರ್ಧಾರದಿಂದ ನನಗೆ ಬೇಸರವಾಗಿದೆ. ನನಗೆ ಏನು ಹೇಳಬೇಕೆಂದು ತಿಳಿಯುತ್ತಿಲ್ಲ, ಅವರೆಲ್ಲರೂ ಪ್ರಬುದ್ಧರು ಎಂದು ಪದ್ಮ ಪ್ರಶಸ್ತಿ ವಿತರಣೆಯ ಸಂದರ್ಭದಲ್ಲಿ ನಡೆದ ಸಂದರ್ಶನವೊಂದರಲ್ಲಿ ಸಿಂಗ್ ಹೇಳಿದ್ದಾರೆ.
ಶುಕ್ರವಾರ ಅಮೃತಸರದಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮೋದಿ ಉಪಸ್ಥಿತಿಯಲ್ಲಿ ಕೊಹ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ದೇಶದಲ್ಲಿ ಮೋದಿ ಅಲೆ ಇಲ್ಲ ಎಂದು ಪ್ರಧಾನಿ ಸಿಂಗ್ ಹೇಳಿದ ಬೆನ್ನಲ್ಲೇ ಅವರ ಸಹೋದರ ಬಿಜೆಪಿ ಸೇರ್ಪಡೆಯಾಗಿರುವುದು ಕಾಂಗ್ರೆಸ್ಗೆ ಟಾಂಗ್ ನೀಡಿದಂತಾಗಿದೆ.
ತಮ್ಮ ಸಹೋದರ ಬಿಜೆಪಿಗೆ ಸೇರ್ಪಡೆಯಾಗಿರುವುದಕ್ಕೆ ವಿಷಾದಿಸಿದ ಸಿಂಗ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮತ್ತೆ ಅಧಿಕಾರಕ್ಕೆ ಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


