'ಹನಿಮೂನ್ ಹೇಳಿಕೆ': ಕ್ಷಮೆಯಾಚಿಸಿದ ರಾಮ್ದೇವ್
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ದೇವ್ ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ.
ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮಿಸಿ ಎಂದು ರಾಮ್ದೇವ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಪಿಕನಿಕ್ ಹಾಗೂ ಹನಿಮೂನ್ಗಾಗಿ ದಲಿತರ ಮನೆಗಳಿಗೆ ಭೇಟಿ ನೀಡುತ್ತಾರೆ ಎಂದು ನಿನ್ನೆ ರಾಮ್ದೇವ್ ಹೇಳಿದ್ದರು. ರಾಮ್ದೇವ್ ಅವರ ಈ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿತ್ತು. ಅಲ್ಲದೆ ಹೇಳಿಕೆ ಸಂಬಂಧ ಬಾಬಾ ರಾಮ್ದೇವ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿತ್ತು.
ರಾಮ್ದೇವ್ ಅವರ ಹೇಳಿಕೆ ದಲಿತ ವಿರೋಧಿ ಎಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಈ ಸಂಬಂಧ ಯೋಗ ಗುರು ಬಾಬಾ ರಾಮ್ದೇವ್ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.
ರಾಮ್ದೇವ್ ವಿರುದ್ಧ ಎಫ್ಐಆರ್ ದಾಖಲು
ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ದೇವ್ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಿನ್ನೆ ರಾಮ್ದೇವ್ ನೀಡಿದ ಹೇಳಿಕೆಯ ವಿಡಿಯೋವನ್ನು ಪರಿಶೀಲಿಸಿದ ಬಳಿಕ ಮಹಾನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 171(ಜಿ) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಬಿಬುಲ್ಲಾ ಹಸ್ಸಾನ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಈ ಮಧ್ಯೆ. ದಲಿತರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಬಾಬಾ ರಾಮ್ದೇವ್ ವಿರುದ್ಧ ರಾಷ್ಟ್ರೀಯ ಪರಿಶಿಷ್ಟ ಪಂಗಡದ ಆಯೋಗ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಸಹ ದೂರು ದಾಖಲಿಸಿಕೊಂಡಿದೆ.
ನಿನ್ನೆ ಉತ್ತರ ಪ್ರದೇಶದ ಲಖನೌನಲ್ಲಿ ಮಾತನಾಡಿದ್ದ ರಾಮ್ದೇವ್, ರಾಹುಲ್ ಗಾಂಧಿ ಅವರು ಹನಿಮೂನ್ ಹಾಗೂ ಪಿಕನಿಕ್ಗಾಗಿ ದಲಿತರ ಮನೆಗಳಿಗೆ ತೆರಳುತ್ತಾರೆ ಎಂದಿದ್ದರು. ಅಲ್ಲದೆ ನೀನು ವಿದೇಶಿ ಹುಡುಗಿಯನ್ನು ಮದುವೆಯಾದರೆ ಪ್ರಧಾನಿಯಾಗುವುದಿಲ್ಲ ಎಂದು ಸೋನಿಯಾ ಗಾಂಧಿ ಅವರು ರಾಹುಲ್ ಹೇಳಿದ್ದಾರೆ. ಆದರೆ ಭಾರತೀಯ ಹುಡುಗಿಯನ್ನು ಮದುವೆಯಾಗುವುದು ರಾಹುಲ್ಗೆ ಇಷ್ಟವಿಲ್ಲ ಎಂದು ರಾಮ್ದೇವ್ ವ್ಯಂಗ್ಯವಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

