ಮೇ 16 ರವರೆಗೆ ರಾಮದೇವ್ ಬಹಿರಂಗ ಸಭೆಗೆ ತಡೆ

ನವದೆಹಲಿ: ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದ ಯೋಗಗುರು ಬಾಬಾ ರಾಮದೇವ್ ಅವರ ಬಹಿರಂಗ ಸಭೆಗೆ ಮೇ 16ರವರೆಗೆ ತಡೆ ನೀಡಲಾಗಿದೆ.
ಈ ಹಿಂದೆ ನಡೆದ ಬಹಿರಂಗ ಸಭೆಯೊಂದರಲ್ಲಿ ಮಾತನಾಡಿದ್ದ ಬಾಬಾ ರಾಮದೇವ್ ಅವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಿಕ್ನಿಕ್ ಮತ್ತು ಹನಿಮೂನ್ ಗಾಗಿ ದಲಿತರ ಮನೆಗಳಿಗೆ ಭೇಟಿ ನೀಡುತ್ತಾರೆ ಎಂದು ಹೇಳಿದ್ದರು. ರಾಮದೇವ್ ಅವರ ಈ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿತ್ತು. ಅಲ್ಲದೆ ಪ್ರಕರಣ ಸಂಬಂಧ ರಾಮದೇವ್ ಅವರ ವಿರುದ್ಧ 2 ಪ್ರತ್ಯೇಕ ಎಫ್ಐಆರ್ ಗಳು ಕೂಡ ದಾಖಲಾಗಿತ್ತು.
ನಿನ್ನೆಯಷ್ಟೇ ಕೇಂದ್ರ ಚುನಾವಣಾ ಆಯೋಗ ನೀತಿ ಸಂಹಿತಿಗೆ ಸಂಬಂಧಿಸಿದಂತೆ ನೂತನ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿತ್ತು. ಮಾರ್ಗಸೂಚಿಯಲ್ಲಿ ಜಾತಿ, ಧರ್ಮ, ಜನಾಂಗ ಮತ್ತು ವೈಯುಕ್ತಿಕ ಗೌರವಕ್ಕೆ ಧಕ್ಕೆಯಾಗದಂತೆ ಮಾತನಾಡಬೇಕು ಎಂದು ತಿಳಿಸಿದೆ.
ಬಾಬಾ ರಾಮದೇವ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಲಖನೌ ಜಿಲ್ಲಾಡಳಿತ ಬಾಬಾ ರಾಮದೇವ್ ಅವರ ಬಹಿರಂಗ ಸಭೆಗಳಿಗೆ ತಾತ್ಕಾಲಿಕ ನಿಷೇಧ ಹೇರಿದೆ. ನಿನ್ನೆಯಷ್ಟೇ ತಮ್ಮ ವಿವಾದಾತ್ಮಕ ಹೇಳಿಕೆ ಕುರಿತು ಬಾಬಾ ರಾಮದೇವ್ ಅವರು, ಬಹಿರಂಗ ಕ್ಷಮೆಯಾಚಿಸಿದ್ದರು. ಆದರೆ ಇದೀಗ ಲಖನೌ ಜಿಲ್ಲಾಡಳಿತದ ಕ್ರಮದಿಂದಾಗಿ ಬಾಬಾ ರಾಮದೇವ್ ಅವರಿಗೆ ತೀವ್ರ ಮುಖಭಂಗವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


