ಈಗಿನ ಸುದ್ದಿ

ಬಿಜೆಪಿಯಿಂದ 'ವಾದ್ರಾ' ವಿಡಿಯೋ ಬಿಡುಗಡೆ

ಬಿಜೆಪಿಯಿಂದ 'ವಾದ್ರಾ' ವಿಡಿಯೋ ಬಿಡುಗಡೆ
Published On :

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಅಕ್ರಮ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಪಕ್ಷದ ಆಡಳಿತ ವಿರುವ ಹರ್ಯಾಣ ಮತ್ತು ರಾಜಸ್ತಾನ ರಾಜ್ಯಗಳಲ್ಲಿ ರಾಬರ್ಟ್ ವಾದ್ರಾ ಅವರು ಸಾವಿರಾರು ಕೋಟಿ ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ವಿಡಿಯೋದಲ್ಲಿ ಬಿಜೆಪಿ ಆರೋಪಿಸಿದೆ. ಅಲ್ಲದೆ ಕಾಂಗ್ರೆಸ್ ಅದ್ಯಕ್ಷೆ ಸೋನಿಯಾ ಗಾಂಧಿ ಅವರು ಮತ್ತು ಅವರ ಮಗ ರಾಹುಲ್ ಗಾಂಧಿ ಅವರು ಹೇಗೆ ರಾಬರ್ಟ್ ವಾದ್ರಾ ಅವರಿಗೆ ಬೆಂಬಲ ನೀಡಿದರು ಎಂಬುದರ ಕುರಿತಾಗಿಯೂ ಬಿಜೆಪಿ ಕೆಲ ಸಾಕ್ಷಿಗಳನ್ನು ನೀಡಿದೆ.

ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಅವರು ಈ ವಿಡಿಯೋ ಬಿಡುಗಡೆಯ ನೇತೃತ್ವ ವಹಿಸಿದ್ದು, ವಿಡಿಯೋ ತುಣುಕುಗಳಲ್ಲಿರುವ 'ವಾದ್ರಾ ಮಾದರಿ ಅಭಿವೃದ್ಧಿ'ಯ ಮಾಹಿತಿಗಳನ್ನು ವಿವರಿಸಿದರು. ಅಲ್ಲದೆ ಅಕ್ರಮವಾಗಿ ಭೂಮಿ ಕಬಳಿಸಿ ರಾತ್ರಿ ಬೆಳಗಾಗುವುದರೊಳಗೆ ಶ್ರೀಮಂತರಾಗುವುದೇ ಕಾಂಗ್ರೆಸ್ ಅಭಿವೃದ್ಧಿ ಮಾದರಿ ಎಂದು ಟೀಕಿಸಿದರು.

ಇಂದು ಬೆಳಗ್ಗೆ ರಾಯ್‌ಬರೇಲಿಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದೆ ಕೆಲವೇ ಗಂಟೆಗಳಲ್ಲಿ ಬಿಜೆಪಿ ಈ ವಿಡಿಯೋ ಬಿಡುಗಡೆ ಮಾಡಿದೆ.

ವಾದ್ರಾ ಬೆಂಬಲಕ್ಕೆ ನಿಂತ ಕಾಂಗ್ರೆಸ್
ಈ ನಡುವೆ ಬಿಜೆಪಿ ಬಿಡುಗಡೆ ಮಾಡಿರುವ ವಿಡಿಯೋ ತುಣುಕಿನಲ್ಲಿರುವ ಮಾಹಿತಿಗಳೆಲ್ಲವೂ ಅಸತ್ಯವೆಂದು ಹೇಳಿರುವ ಕಾಂಗ್ರೆಸ್, ಭೂಮಿ ಖರೀದಿಯಲ್ಲಿ ರಾಬರ್ಟ್ ವಾದ್ರಾ ಅವರು ಅಕ್ರಮವೆಸಗಿಲ್ಲ ಎಂದು ಹೇಳಿದೆ. ಕಾನೂನು ಬದ್ಧವಾಗಿಯೇ ಭೂ ಖರೀದಿ ಪ್ರಕ್ರಿಯೆ ನಡೆದಿದ್ದು, ಬಿಜೆಪಿ ಆಧಾರ ರಹಿತ ಆರೋಪಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.