ಈಗಿನ ಸುದ್ದಿ

ಮೋದಿಯನ್ನು ಬಂಧಿಸಲು ಬಲವಾದ ಸಾಕ್ಷಿಯಿದೆ: ಕಪಿಲ್ ಸಿಬಲ್

ಮೋದಿಯನ್ನು ಬಂಧಿಸಲು ಬಲವಾದ ಸಾಕ್ಷಿಯಿದೆ: ಕಪಿಲ್ ಸಿಬಲ್
Published On :

ಅಹಮದಾಬಾದ್: ಇಶ್ರಾತ್ ಜಾಹಾನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಬಂಧಿಸಿಲು ಪ್ರಮುಖ ಸಾಕ್ಷಾಧಾರಗಳಿವೆ ಎಂದು ಕೇಂದ್ರ ಸಚಿವ ಕಪಿಲ್ ಸಿಬಲ್ ಸೋಮವಾರ ಹೇಳಿದ್ದಾರೆ.

ಗುಜರಾತ್‌ನ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 30 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಚುನಾವಣಾ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಸಿಬಲ್ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡಿದರು. ಈ ವೇಳೆ ಮಾತನಾಡಿದ ಅವರು, ಇಶ್ರತ್ ನಕಲಿ ಎನ್‌ಕೌಂಟರ್ ಪ್ರಕರಣ ಸಂಬಂಧಿಸಿದಂತೆ ಮೋದಿ ಹಾಗೂ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

ಇಶ್ರತ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ಯಾವುದೇ ಸಾಕ್ಷಿ ಇಲ್ಲವೆಂದು ಮೋದಿ ತಿಳಿದುಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರದ ಬಳಿ ಪ್ರಕರಣ ಸಂಬಂಧ ಪ್ರಮುಖ ಸಾಕ್ಷಿಗಳು ದೊರಕಿವೆ ಎಂದು ಸಿಬಲ್ ಹೇಳಿದ್ದಾರೆ.

ನಕಲಿ ಎನ್‌ಕೌಂಟರ್‌ಗೂ ಮುನ್ನ ಆರೋಪಿ ಮಾಜಿ ಪೊಲೀಸ್ ಅಧಿಕಾರಿ ಡಿಜಿ ವಂಜಾರಾ ಮತ್ತು ಅಂದಿನ ಗೃಹ ಮಂತ್ರಿಯಾಗಿದ್ದ ಅಮಿತ್ ಶಾ ನಡುವಿನ ದೂರವಾಣಿ ಸಂಭಾಷಣೆ ತುಣುಕುಗಳಿವೆ. ಅಲ್ಲದೆ ಆರೋಪಿ ವಂಜಾರ ಅವರ ಹೇಳಿಕೆಗಳು ಮೋದಿ ವಿರುದ್ಧ ಬೊಟ್ಟು ಮಾಡುವಂತಿದೆ ಎಂದರು.

ಪ್ರಕರಣದಲ್ಲಿ ತಮ್ಮ ಪ್ರಭಾವ ಬೀರಿ ಪ್ರಮುಖ ಸಾಕ್ಷಿಗಳನ್ನು ನಾಶಪಡಿಸುವಲ್ಲಿ ಮೋದಿ ಪಾತ್ರ ಪ್ರಮುಖವಾಗಿದೆ ಎಂದು ದೂರಿದ ಅವರು, ಆದ್ದರಿಂದ ನ್ಯಾಯಾಂಗವೆ ಸ್ವತಃ ಪ್ರಕರಣವನ್ನು ಕೂಲಂಕುಶವಾಗಿ ಪರಿಶೀಲಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮಾನವ ಹಕ್ಕುಗಳನ್ನು ಕಾಪಾಡಬೇಕಿದೆ ಎಂದು ಸಿಬಲ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.