2002 ಗುದ್ದೋಡು ಪ್ರಕರಣ; ವಿಚಾರಣೆಗೆ ಸಲ್ಲು ಗೈರು

ನವದೆಹಲಿ: 2002ರ ಗುದ್ದೋಡು (ಹಿಟ್ ಆ್ಯಂಡ್ ರನ್) ಪ್ರಕರಣದ ಬಗ್ಗೆ ಸೋಮವಾರ ಮುಂಬೈ ಕೋರ್ಟ್ನಲ್ಲಿ ವಿಚಾರಣೆ ನಡೆದಿದ್ದು ಸಾಕ್ಷಿದಾರರು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳಿದ್ದಾರೆ.
ಕಾರೊಂದು ತನ್ನ ಅಂಗಡಿಯ ಶಟರ್ಗೆ ಗುದ್ದಿದೆ ಎಂದು ಹೇಳಿದ ಸಾಕ್ಷಿದಾರರು ತಾನು ಕಾರಿನ ನಂಬರ್ ಪ್ಲೇಟ್ ಮತ್ತು ಒಡೆದ ಗಾಜಿನ ಚೂರುಗಳನ್ನು ನೋಡಿರುವುದಾಗಿ ಹೇಳಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಬಿದ್ದಿದ್ದ ಗಾಜಿನ ಚೂರು ಹಾಗು ಕಾರಿನ ಬಂಪರ್ನ ಭಾಗವನ್ನು ಪೊಲೀಸರು ಸಂಗ್ರಹಿಸಿದ್ದು, ತಾನು ಅದನ್ನು ಗುರುತಿಸಬಲ್ಲೆ ಎಂದು ಸಾಕ್ಷಿದಾರರು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು 64 ಸಾಕ್ಷಿದಾರರು ಇದ್ದು, ಇದರಲ್ಲಿ ಎಲ್ಲರನ್ನು ವಿಚಾರಣೆಗೊಳಪಡಿಸಲಾಗುವುದಿಲ್ಲ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದ್ದಾರೆ.
ಆದಾಗ್ಯೂ, ಇಂದು ನಡೆದ ವಿಚಾರಣೆಗೆ ಸಲ್ಮಾನ್ ಖಾನ್ ಗೈರು ಹಾಜರಾಗಿದ್ದರು,
ಘಟನೆ ಹಿನ್ನಲೆ: ಸೆಪ್ಟೆಂಬರ್ 2002ರಲ್ಲಿ ಬಾಂದ್ರಾದ ರಸ್ತೆ ಬದಿಯಲ್ಲಿ ಮಲಗಿದ್ದ ಜನರ ಮೇಲೆ ಅಸಡ್ಡೆಯಿಂದ ತಮ್ಮ ಕಾರು ಓಡಿಸಿದರ ಪರಿಣಾಮ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ನಾಲ್ವರಿಗೆ ಗಾಯಗಳಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


