ಬಾಬಾ ರಾಮ್ದೇವ್ ಬಂಧನ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ದೇವ್ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಅವರನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ಅವರು ಹನಿಮೂನ್ ಮತ್ತು ಪಿಕ್ನಿಕ್ಗಾಗಿ ದಲಿತರ ಮನೆಗೆ ಹೋಗುತ್ತಾರೆ ಎಂಬ ಯೋಗ ಗುರಿವಿನ ಹೇಳಿಕೆ ಚುನಾವಣಾ ಆಯೋಗ ಹಾಗೂ ದಲಿತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ವಿವಾದಾತ್ಮಕ ಹೇಳಿಕೆ ನೀಡಿರುವ ರಾಮ್ದೇವ್ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿರುವ ಚುನಾವಣಾ ಆಯೋಗ, ಹಿಮಾಚಲಪ್ರದೇಶದಲ್ಲಿ ರಾಮ್ದೇವ್ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ರದ್ದುಗೊಳಿಸಿದೆ. ಕಾಂಗ್ರಾ, ಚಾಂಬಾ ಹಾಗೂ ನೂರ್ಪುರಗಳಲ್ಲಿ ಬಾಬಾ ರಾಮ್ದೇವ್ ಪ್ರಚಾರ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಈ ಕಾರ್ಯಕ್ರಮ ನಡೆಸದಂತೆ ಚುನಾವಣಾ ಆಯೋಗ ರಾಮ್ದೇವ್ಗೆ ಸೂಚಿಸಿದೆ.
ಇನ್ನು ಈ ಸಂಬಂಧ ರಾಮ್ದೇವ್ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿ ಉತ್ತರ ಪ್ರದೇಶದ ಲಖನೌನಲ್ಲಿ ಒಂದು ಹಾಗೂ ಮಹಾರಾಷ್ಟ್ರದ ನಾಗ್ಪುರದಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಮೈಸೂರು ಸೇರಿದಂತೆ ದೇಶದ ಹಲವು ಕಡೆ ದಲಿತ ಸಂಘಟನೆಗಳು ರಾಮ್ದೇವ್ ಹೇಳಿಕೆಯನ್ನು ಖಂಡಿಸಿವೆ ಮತ್ತು ಕೂಡಲೇ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿವೆ.
ಯೋಗ ಗುರು ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರು: ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಾಬಾ ರಾಮ್ದೇವ್ ವಿರುದ್ಧ ಇಂದು ಮೈಸೂರಿನಲ್ಲಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ದಲಿತಪರ ಸಂಘಟನೆಗಳು ಅಶೋಕಪುರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ದಾರಿ ಮಧ್ಯೆ ಇದ್ದ ರಾಮ್ದೇವ್ ಅವರ ಪತಂಜಲಿ ಯೋಗ ಕೇಂದ್ರದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಶಿಖಾ ಅವರಿಗೆ ಮನವಿ ಸಲ್ಲಿಸಿದರು.
ಇನ್ನು ರಾಮ್ದೇವ್ ಅವರ ಹೇಳಿಕೆಯನ್ನು ಖಂಡಿಸಿರುವ ಸಂಸದ ಎಚ್.ವಿಶ್ವನಾಥ್ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಅವರು ದಲಿತ ವಿರೋಧಿ. ಅವರ ಮುಖವಾಡ ಈಗ ಕಳಚಿದೆ ಎಂದರು.
ತುಮಕೂರು, ಬಿಜಾಪುರ ಮತ್ತು ಬಳ್ಳಾರಿ ಸೇರಿದಂತೆ ರಾಜ್ಯಾದ್ಯಂತ ಹಲವು ಕಡೆ ರಾಮ್ದೇವ್ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


