ಈಗಿನ ಸುದ್ದಿ

ಬಿಜೆಪಿ ಜತೆ ಕೈಜೋಡಿಸಿದ್ದಕ್ಕಾಗಿ ಗ್ಯಾಂಗ್‌ರೇಪ್: ಮಹಿಳೆ ಆರೋಪ

Published On :

ರಾಂಚಿ: ಬಿಜೆಪಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಕ್ಕಾಗಿ ಸುಮಾರು 12ಕ್ಕಿಂತ ಹೆಚ್ಚು ಜನರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ರಾಂಚಿಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಸೇರಿದ 30ರ ಹರೆಯದ ಮಹಿಳೆಯೊಬ್ಬರು ಈ ರೀತಿ ಆರೋಪ ಮಾಡಿದ್ದಾರೆ. ಸೋಮವಾರ ತನ್ನ ಮನೆ  ಮೇಲೆ ಗುಂಪೊಂದು ದಾಳಿ ಮಾಡಿದ್ದು, ತನ್ನ 13ರ ಹರೆಯದ ಮಗಳನ್ನು ದೌರ್ಜನ್ಯಗೊಳಪಡಿಸಿದ್ದಾರೆ. ದಾಳಿ ನಡೆದ ವೇಳೆ ಆಕೆಯ ಗಂಡನ ಕೈಯನ್ನು ದುಷ್ಕರ್ಮಿಗಳು ಕಟ್ಟಿ ಹಾಕಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಆದಾಗ್ಯೂ, ಈ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಖಂಡ್ ಪೊಲೀಸ್ ವಕ್ತಾರ ಅನುರಾಗ ಗುಪ್ತಾ , ಈ ದಾಳಿಯ ಹಿಂದೆ ರಾಜಕೀಯ ಕೈವಾಡವಿದೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಮುಸ್ಲಿಂ ಅಲ್ಪ ಸಂಖ್ಯಾತರನ್ನು ಓಲೈಸಲು ಬಿಜೆಪಿ ಇದೀಗ ಅಲ್ಪಸಂಖ್ಯಾತರನ್ನು ತಮ್ಮತ್ತ ಸೆಳೆಯುತ್ತಿದೆ. ಏತನ್ಮಧ್ಯೆ, ಬಿಜೆಪಿ ಜತೆ ಕೆಲಸ ಮಾಡಿದುದಕ್ಕೆ ಗ್ಯಾಂಗ್‌ರೇಪ್‌ಗೊಳಗಾಗಿದ್ದೀನಿ ಎಂದು ಮಹಿಳೆ ಆರೋಪ ಮಾಡಿರುವ ಬಗ್ಗೆ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.