ಈಗಿನ ಸುದ್ದಿ

ಮೋದಿ ಮೇಲೆ ಆತ್ಮಾಹುತಿ ದಾಳಿ: ರಾಷ್ಟ್ರಪತಿಗೆ ವಿಎಚ್‌ಪಿ ಪತ್ರ

ಮೋದಿ ಮೇಲೆ ಆತ್ಮಾಹುತಿ ದಾಳಿ: ರಾಷ್ಟ್ರಪತಿಗೆ ವಿಎಚ್‌ಪಿ ಪತ್ರ
Published On :

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮೇಲೆ ಆತ್ಮಾಹುತಿ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ), ಈ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿದೆ.

ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಹತ್ಯೆ ಮಾದರಿಯಲ್ಲೇ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದ್ದು, ಅವರ ಭದ್ರತೆಯನ್ನು ಹೆಚ್ಚಿಸಿಬೇಕು ಎಂದು ರಾಷ್ಟ್ರಪತಿಯವರಿಗೆ ಮನವಿ ಮಾಡಲಾಗಿದೆ ಎಂದು ವಿಎಚ್‌ಪಿ ನಾಯಕ ಅಶೋಕ್ ಸಿಂಘಾಲ್ ಅವರು ತಿಳಿಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿಯ ಮೇಲೆ ಆತ್ಮಾಹುತಿ ದಾಳಿ ನಡೆಯುವ ಸಾಧ್ಯತೆ ಇದ್ದು, ನಿಮ್ಮ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಮೂಲಕ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಸಿಂಘಾಲ್ ಅವರು ಸೋಮವಾರ ರಾಷ್ಟ್ರಪತಿಗೆ ಸಲ್ಲಿಸಿದ ಪತ್ರದಲ್ಲಿ ಹೇಳಿದ್ದಾರೆ.

ಗುಪ್ತಚರ ಇಲಾಖೆ(ಐಬಿ) ಸಹ ಈ ಬಗ್ಗೆ ಮೋದಿ ಅವರಿಗೆ ಎಚ್ಚರಿಕೆ ನೀಡಿದೆ. ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ. ಆದರೆ ಆತ್ಮಹತ್ಯೆ ದಾಳಿಕೋರ ಗಂಡು ಅಥವಾ ಹೆಣ್ಣು ಎಂಬುದನ್ನು ಗುಪ್ತಚರ ವರದಿಯಲ್ಲಿ ಸ್ಪಷ್ಟವಾಗಿ ಹೇಳಿಲ್ಲ ಎಂದು ಸಿಂಘಾಲ್ ತಿಳಿಸಿದ್ದಾರೆ.

ಮೋದಿ ಅವರು ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಬಂಧಿಸಲಾಗುವುದು ಎಂದು ಹೇಳಿದ ಬೆನ್ನಲ್ಲೇ, ದಾವೂದ್ ಇಬ್ರಾಹಿಂ, ಇಂಡಿಯನ್ ಮುಜಾಹಿದ್ದೀನ್ ಹಾಗೂ ಪಾಕಿಸ್ತಾನದ ಐಎಸ್‌ಐ ಮೋದಿ ಹತ್ಯೆಗೆ ಸಂಚು ರೂಪಿಸಿದೆ ಎಂದು ವಿಎಚ್‌ಪಿ ಹೇಳಿಕೊಂಡಿದೆ.

3 ಹಂತದ ಭದ್ರತೆ: ಉಗ್ರರ ಹಿಟ್‌ಲಿಸ್ಟ್‌ನಲ್ಲಿರುವ ಮೋದಿ ಅವರಿಗೆ ಈಗಾಗಲೇ ಮೂರು ಹಂತದ ಭದ್ರತೆ ಕಲ್ಪಿಸಲಾಗಿದೆ. ಮೊದಲನೆಯ ಹಂತದ ಭದ್ರತಾ ಸಿಬ್ಬಂದಿ ದಾಳಿಕೋರರ ಮೇಲೆ ಕಣ್ಣಿಡುತ್ತದೆ ಹಾಗೂ ಪ್ರತಿದಾಳಿ ನಡೆಸುತ್ತಾರೆ, ಎರಡನೇ ಹಂತದ ಸಿಬ್ಬಂದಿ ಮೋದಿ ಅವರನ್ನು ಕವರ್ ಮಾಡಿಕೊಂಡು ಅವರನ್ನು ರಕ್ಷಿಸುತ್ತಾರೆ. ಮೂರನೇ ಹಂತದ ಸಿಬ್ಬಂದಿ ಅವರನ್ನು ಸುರಕ್ಷಿತವಾಗಿಡುವ ಕೆಲಸ ಮಾಡುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.