7ನೇ ಹಂತ: 9 ರಾಜ್ಯಗಳಲ್ಲಿ ಬಿರುಸಿನ ಮತದಾನ

ನವದೆಹಲಿ: ನೂತನ ರಾಜ್ಯ ತೆಲಂಗಾಣ ಹಾಗೂ ಎರಡು ಕೇಂದ್ರಾಡಳಿತ ಪ್ರದೇಶ ಸೇರಿದಂತೆ 9 ರಾಜ್ಯಗಳಲ್ಲಿ 7ನೇ ಹಂತದ ಮಹಾಮತದಾನ ಬುಧವಾರ ಬೆಳಗ್ಗೆಯಿಂದ ಆರಂಭವಾಗಿದ್ದು, ಬಿರುಸಿನ ಮತದಾನ ನಡೆಯುತ್ತಿದೆ.
ಗುಜರಾತ್ನ ಅಹಮದಾಬಾದ್ನಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ಆಂಧ್ರಪ್ರದೇಶದ ಹೈದರಾಬಾದ್ನಲ್ಲಿ ನಟ ಹಾಗೂ ಕೇಂದ್ರ ಸಚಿವ ಚಿರಂಜೀವಿ ಮತ್ತು ಉತ್ತರ ಪ್ರದೇಶದ ಲಖನೌನಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ ಸೇರಿದಂತೆ ಹಲವು ಘಟಾನುಘಟಿಗಳು ಇಂದು ಬೆಳಗ್ಗೆಯಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಒಟ್ಟು 9 ಹಂತಗಳ ಮತದಾನದ ಪೈಕಿ ಈ ಹಂತ ನಾಲ್ಕನೆ ಅತಿ ದೊಡ್ಡ ಹಂತವಾಗಿದೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ (ವಡೋದರ), ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ರಾಜನಾಥ್ ಸಿಂಗ್, ಮುರಳಿ ಮನೋಹರ ಜೋಷಿ, ಫಾರೂಕ್ ಅಬ್ದುಲ್ಲಾ, ಜೆಡಿಯು ಅಧ್ಯಕ್ಷ ಶರದ್ ಯಾದವ್ ಸೇರಿ ಘಟಾನುಘಟಿಗಳೇ ಕಣದಲ್ಲಿದ್ದಾರೆ.
ಗುಜರಾತ್ನ 26, ತೆಲಂಗಾಣದ 17, ಪಶ್ಚಿಮ ಬಂಗಾಳದ 9, ಜಮ್ಮು ಮತ್ತು ಕಾಶ್ಮೀರದ 1, ಉತ್ತರ ಪ್ರದೇಶ 14, ಬಿಹಾರದ 7, ಪಂಜಾಬ್ನ ಎಲ್ಲಾ 13, ಕ್ಷೇತ್ರಗಳು ಸೇರಿದಂತೆ ಒಟ್ಟು 89 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಿಗೂ ಇಂದೇ ಮತದಾನ ನಡೆಯುತ್ತಿದೆ.
3 ಗಂಟೆಯವರೆಗೆ ಶೇಕಡಾವಾರು ಮತದಾನ
ಗುಜರಾತ್ ಶೇ. 45ರಷು
ತೆಲಂಗಾಣ ಶೇ. 60
ಪಶ್ಚಿಮ ಬಂಗಾಳ ಶೇ. 50
ಜಮ್ಮು ಮತ್ತು ಕಾಶ್ಮೀರ ಶೇ. 30
ಉತ್ತರ ಪ್ರದೇಶ ಶೇ. 46
ಬಿಹಾರದ ಶೇ. 47
ಪಂಜಾಬ್ ಶೇ. 54.7
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


