ಈಗಿನ ಸುದ್ದಿ

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಹೇಳಿಕೆ: ವಿ.ಆರ್.ಭಟ್ ಬಂಧನ

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಹೇಳಿಕೆ: ವಿ.ಆರ್.ಭಟ್ ಬಂಧನ
Published On :

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಬರಹಗಾರ ವಿ.ಆರ್.ಭಟ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಹಾಗೂ ಮಹಿಳಾ ಹೋರಾಟಗಾರ್ತಿ ಪ್ರಭಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಟ್ ಅವರನ್ನು ಚಂದ್ರಾಲೇಔಟ್ ಪೊಲೀಸರು ಇಂದು ಯಶವಂತಪುರದಲ್ಲಿ ಬಂಧಿಸಿದ್ದಾರೆ.

ಪ್ರಭಾ ಅವರು ತಮ್ಮ ವಿರುದ್ಧ ಫೇಸ್‌ಬುಕ್‌ನಲ್ಲಿ ಅತ್ಯಾಚಾರ ಬೆದರಿಕೆ ಮತ್ತು ಅತ್ಯಾಚಾರಕ್ಕೆ ಪ್ರಚೋದನೆ ನೀಡಿದ್ದ ಭಟ್ ವಿರುದ್ಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮಹಿಳಾ ಹೋರಾಟಗಾರ್ತಿ ದೂರು ನೀಡಿದ ಬಳಿಕ ನಾಪತ್ತೆಯಾಗಿದ್ದ ಭಟ್ ಅವರ ಪತ್ತೆಯಾಗಿ ಪೊಲೀಸರು ನಾಲ್ಕು ತಂಡ ರಚಿಸಿದ್ದರು.

ಸನಾತನ ಧರ್ಮ ಉಪಯೋಗಕ್ಕಿಲ್ಲ ಎಂಬ ಪ್ರಭಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಭಟ್, ಸನಾತನ ಧರ್ಮದ ಮಹತ್ವ ತಿಳಿಯದ ನಿಮ್ಮಂಥವರ ಜುಟ್ಟು ಹಿಡಿದು ಅತ್ಯಾಚಾರ ಮಾಡಿದರೆ ಸರಿಯಾಗುತ್ತದೆ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ಫೇಸ್‌ಬುಕ್‌ನಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮೆಂಟ್ ತೆಗೆದು ಹಾಕಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.