ಜಯ ವಿರುದ್ಧ ಅವಹೇಳನಕಾರಿ ಲೇಖನ: ಲಂಕಾ ರಾಯಭಾರಿ ಕಚೇರಿಗೆ ಸಮನ್ಸ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತ ಕುರಿತಂತೆ ಪ್ರಕಟವಾದ ಅವಹೇಳನಕಾರಿ ಲೇಖನದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಜಯಲಲಿತ ವಿರುದ್ಧದ ಅವಹೇಳನಕಾರಿ ಲೇಖನ ಕುರಿತಂತೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸುಷ್ಮಾ ಸ್ವರಾಜ್ ಅವರು, ಈ ಸಂಬಂಧ ಶ್ರೀಲಂಕಾ ರಾಯಭಾರಿ ಕಚೇರಿಗೆ ಸಮನ್ಸ್ ಜಾರಿಗೊಳಿಸಲಾಗುವುದು ಎಂದರು.
ಇಂದು ಲೋಕಸಭೆಯಲ್ಲಿ ಮಾತನಾಡಿದ ಅವರು, ಜಯಲಲಿತಾ ವಿರುದ್ಧ ಅವಹೇಳನಕಾರಿ ಲೇಖನವನ್ನು ತೀವ್ರವಾಗಿ ಖಂಡಿಸಿದ್ದು, ಈ ಸಂಬಂಧ ಶ್ರೀಲಂಕಾದ ಹಿರಿಯ ಅಧಿಕಾರಿಗಳನ್ನು ಕರೆಸಿ ಚರ್ಚಿಸಲಾಗುವುದು ಎಂದು ಸದನಕ್ಕೆ ತಿಳಿಸಿದ್ದಾರೆ.
ಲೇಖನದ ಬಗ್ಗೆ ಇಂದು ಕೂಡ ಸಂಸತ್ತಿನ ಉಭಯ ಸದನಗಳಲ್ಲಿ ಕೋಲಾಹಲ ಉಂಟಾಗಿ ಕಲಾಪಗಳನ್ನು ಮುಂದೂಡಿದ ಪ್ರಸಂಗ ನಡೆಸಿತು. ಲೋಕಸಭೆಯಲ್ಲಿ ಸದನ ಆರಂಭವಾಗುತ್ತಿದ್ದಂತೆಯೇ ಎಐಎಡಿಎಂಕೆ ಸಂಸದರು ಜಯಲಲಿತ ವಿರುದ್ಧ ಶ್ರೀಲಂಕಾ ವೆಬ್ ಸೈಟ್ ನಲ್ಲಿ ಪ್ರಕಟವಾದ ಲೇಖನದ ಬಗ್ಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿ ಗದ್ದಲ ಎಬ್ಬಿಸಿದ್ದರು.
ಶ್ರೀಲಂಕಾದ ರಕ್ಷಣಾ ಇಲಾಖೆ ವೆಬ್ಸೈಟ್ನಲ್ಲಿ ಈ ಹಿಂದೆ ಯುಪಿಎ ಸರ್ಕಾರಕ್ಕೆ ಬರೆಯುತ್ತಿದ್ದಂತೆ ಮೋದಿಗೂ ಪತ್ರ ಬರೆದರೆ ಏನು ನಡೆಯೋದಿಲ್ಲ. ಮೋದಿ ಮೇಲೆ ಪ್ರಭಾವ ಬೀರಬೇಕಾದ್ರೆ ಜಯಲಲಿತಾ ಪ್ರೇಮ ಪತ್ರದ ರೀತಿಯಲ್ಲಿ ಪತ್ರ ಬರಬೇಕಾಗುತ್ತೆ ಎಂದು ಬರೆಯಲಾಗಿದೆ.
ಇಂತಹ ಅವಹೇಳನಕಾರಿ ಲೇಖನ ಪ್ರಕಟವಾಗುತ್ತಿದಂತೆ ತಮಿಳುನಾಡಿನಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


